ADVERTISEMENT

ಕರ್ಣಿ ಸೇನಾ ಮುಖ್ಯಸ್ಥನ ಗುಂಡಿಕ್ಕಿ ಹತ್ಯೆ: ಹೊಣೆ ಹೊತ್ತ ಗೋಲ್ಡಿ ಬ್ರಾರ್ ಗ್ಯಾಂಗ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಡಿಸೆಂಬರ್ 2023, 3:27 IST
Last Updated 6 ಡಿಸೆಂಬರ್ 2023, 3:27 IST
<div class="paragraphs"><p>ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ನಿವಾಸದ ಎದುರು ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.</p></div>

ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ನಿವಾಸದ ಎದುರು ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

   

–ಪಿಟಿಐ ಚಿತ್ರ

ಜೈಪುರ: ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆಯ ಹೊಣೆಯನ್ನು ಗೋಲ್ಡಿ ಬ್ರಾರ್ ಗ್ಯಾಂಗ್‌ ಹೊತ್ತುಕೊಂಡಿದೆ.

ADVERTISEMENT

ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ದುಷ್ಕರ್ಮಿಗಳ ಗುಂಪೊಂದು ಮಂಗಳವಾರ ಗುಂಡಿಕ್ಕಿ ಹತ್ಯೆ ಮಾಡಿತ್ತು. ಗೋಲ್ಡಿ ಬ್ರಾರ್ ಗ್ಯಾಂಗ್‌ನ ಸದಸ್ಯ ರೋಹಿತ್ ಗೋಡರಾ ಕಪುರಿಸ್ರ್ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದ್ದಾನೆ.

‘ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆಯ ಸಂಪೂರ್ಣ ಜವಾಬ್ದಾರಿಯನ್ನು ನಾವು ತೆಗೆದುಕೊಳ್ಳುತ್ತೇವೆ’ ಎಂದು ರೋಹಿತ್ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದು, ಗೊಡಮೇಡಿ ನಮ್ಮ ಶತ್ರುಗಳನ್ನು ಬೆಂಬಲಿಸುತ್ತಿದ್ದರು ಎಂದು ದೂರಿದ್ದಾರೆ.

ಗೋಲ್ಡಿ ಬ್ರಾರ್ ಗ್ಯಾಂಗ್‌ ಕೆನಡಾ ಮೂಲದ ದರೋಡೆಕೋರರಾಗಿದ್ದು, ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಗಳಿಗೆ ಬೇಕಾಗಿದ್ದಾರೆ.

ಬಂದ್‌ಗೆ ಕರೆ: ಸುಖದೇವ್ ಸಿಂಗ್ ಗೊಗಮೆಡಿ ಅವರ ಹತ್ಯೆ ಖಂಡಿಸಿ ಹಲವು ರಜಪೂತ ಸಂಘಟನೆಗಳು ಇಂದು (ಬುಧವಾರ) ರಾಜಸ್ಥಾನ ಬಂದ್‌ಗೆ ಕರೆ ನೀಡಿವೆ.

ಏನಿದು ಘಟನೆ: ಮಂಗಳವಾರ ಮಧ್ಯಾಹ್ನ ಶ್ಯಾಮ್ ನಗರ ಪ್ರದೇಶದಲ್ಲಿ ಸುಖದೇವ್ ಸಿಂಗ್ ಅವರನ್ನು ಹತ್ಯೆ ಮಾಡಲಾಗಿತ್ತು. ಪ್ರಾಥಮಿಕ ವರದಿಗಳ ಪ್ರಕಾರ, ಗೊಗಮೆಡಿ ಅವರ ಮನೆಗೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಅವರ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ರಾಜಸ್ಥಾನ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಉಮೇಶ್ ಮಿಶ್ರಾ ‘ಪಿಟಿಐ’ಗೆ ತಿಳಿಸಿದ್ದಾರೆ.

‘ಗೊಗಮೆಡಿ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಷ್ಟರಲ್ಲಿ ಅವರು ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ' ಎಂದು ಜೈಪುರ ಪೊಲೀಸ್ ಆಯುಕ್ತ ಬಿಜು ಜಾರ್ಜ್ ಜೋಸೆಫ್ ‘ಪಿಟಿಐ’ಗೆ ತಿಳಿಸಿದ್ದಾರೆ.

ರಾಜಕೀಯ ಕೆಸರೆರಚಾಟ: ರಾಜ್ಯದಲ್ಲಿ ಸರ್ಕಾರ ರಚಿಸಲು ಮುಂದಾಗಿರುವ ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿರುವ ಕರ್ಣಿ ಸೇನಾ ಇಂದು (ಬುಧವಾರ) ರಾಜಸ್ಥಾನ ಬಂದ್‌ಗೆ ಕರೆ ನೀಡಿದೆ.

ಇತ್ತ ವಿಧಾನಸಭೆ ಚುನಾವಣಾ ಫಲಿತಾಂಶ ಹೊರಬಿದ್ದ ಎರಡೇ ದಿನದಲ್ಲಿ ಕರ್ಣಿ ಸೇನೆಯ ಮುಖ್ಯಸ್ಥನ ಹತ್ಯೆಯಾಗಿರುವುದು ಕಾಂಗ್ರೆಸ್‌ –ಬಿಜೆಪಿ ನಡುವೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.

ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ಸುಖದೇವ್ ಸಿಂಗ್ ಗೊಗಮೆಡಿ ಮಾತನಾಡಿರುವ ವಿಡಿಯೊವನ್ನು ‘ಎಕ್ಸ್‌’ನಲ್ಲಿ ಹಂಚಿಕೊಂಡಿದ್ದಾರೆ. ಕಾಂಗ್ರೆಸ್‌ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರು ತಮ್ಮ ಭದ್ರತೆಯನ್ನು ಕಡಿತಗೊಳಿಸಿದ್ದಾರೆ ಎಂದು ವಿಡಿಯೊದಲ್ಲಿ ಗೊಗಮೆಡಿ ಹೇಳಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.