ADVERTISEMENT

ಸಕಲ ಸರ್ಕಾರಿ ಗೌರವದೊಂದಿಗೆ ರತನ್ ಟಾಟಾ ಅಂತ್ಯಕ್ರಿಯೆ: ಮಹಾ ಸಿಎಂ ಏಕನಾಥ ಶಿಂದೆ

ಪಿಟಿಐ
Published 10 ಅಕ್ಟೋಬರ್ 2024, 2:25 IST
Last Updated 10 ಅಕ್ಟೋಬರ್ 2024, 2:25 IST
ರತನ್‌ ಟಾಟಾ
ರತನ್‌ ಟಾಟಾ   

ಮುಂಬೈ: ಹೆಸರಾಂತ ಕೈಗಾರಿಕೋದ್ಯಮಿ ರತನ್ ಟಾಟಾ ಅವರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಟಾಟಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಗುರುವಾರ ಬೆಳಗ್ಗೆ 10 ರಿಂದ ಸಂಜೆ 4ರವರೆಗೆ ದಕ್ಷಿಣ ಮುಂಬೈನ ರಾಷ್ಟ್ರೀಯ ಲಿಲಿತ ಕಲಾ ಕೇಂದ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಬುಧವಾರ ಬೆಳಿಗ್ಗೆ ಅವರ ಆರೋಗ್ಯಸ್ಥಿತಿಯಲ್ಲಿ ಏರುಪೇರು ಕಾಣಿಸಿಕೊಂಡ ಕಾರಣ ಅವರನ್ನು ಮುಂಬೈನ ಬ್ರೀಚ್‌ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿ ಸುಮಾರಿಗೆ 11.30 ಗಂಟೆಗೆ ಅವರು ನಿಧನರಾದರು.

ADVERTISEMENT

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಶಿಂದೆ, 'ಟಾಟಾ ಎಂದರೆ ನೈತಿಕತೆ ಮತ್ತು ಉದ್ಯಮಶೀಲತೆಯ ವಿಶಿಷ್ಟ ಮಿಶ್ರಣ. 150 ವರ್ಷಗಳ ಹಳೆಯದಾದ ಟಾಟಾ ಸಮೂಹವನ್ನು ಯಶಸ್ವಿಯಾಗಿ ಮುನ್ನಡೆಸಿದ ಜೀವಂತ ದಂತಕಥೆಯಾಗಿದ್ದರು. ಟಾಟಾ ಅವರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು' ಎಂದು ತಿಳಿಸಿದ್ದಾರೆ.

ಟಾಟಾ ದೇಶದ ಹೆಮ್ಮೆ ಎಂದು ಬಣ್ಣಿಸಿದ ಶಿಂದೆ, ಮುಂದಿನ ಪೀಳಿಗೆಯ ಉದ್ಯಮಿಗಳಿಗೆ ಅವರು ಸದಾ ಸ್ಫೂರ್ತಿಯಾಗಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಇಂದು ಒಂದು ದಿನದ ಶೋಕಾಚರಣೆ ಇರಲಿದ್ದು, ಯಾವುದೇ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ ಎಂದು ಶಿಂದೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.