ನವದೆಹಲಿ: ಅನುಭವಿ ರಾಯಭಾರಿ ಹಾಗೂ ವಿದೇಶಾಂಗ ಸಚಿವಾಲಯದ ಮಾಜಿ ವಕ್ತಾರ ರವೀಶ್ ಕುಮಾರ್ ಅವರನ್ನು ಫಿನ್‌ಲ್ಯಾಂಡ್‌ನಲ್ಲಿ ಭಾರತದಮುಂದಿನ ರಾಯಭಾರಿಯಾಗಿ ನೇಮಕ ಮಾಡಲಾಗಿದೆ ಎಂದು ಭಾರತ ಸರ್ಕಾರ ಬುಧವಾರ ಹೇಳಿದೆ. ಸದ್ಯ ವಾಣಿ ರಾವ್ ಅವರು ಫಿನ್‌ಲ್ಯಾಂಡ್‌ನಲ್ಲಿ ಭಾರತದ ರಾಯಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕುಮಾರ್ ಅವರು ಭಾರತೀಯ ವಿದೇಶಿ ಸೇವೆಯ 1995ನೇ ಬ್ಯಾಚ್‌ನವರು. ವಿದೇಶಾಂಗ ಸಚಿವಾಲಯದ ವಕ್ತಾರರಾಗಿ 2017ನೇ ಜುಲೈನಿಂದ 2020ನೇ ಏಪ್ರಿಲ್ ವರೆಗೂ ಕಾರ್ಯನಿರ್ವಹಿಸಿದ್ದಾರೆ. ಬಾಲಾಕೋಟ್ ದಾಳಿ, ಜಮ್ಮು ಕಾಶ್ಮೀರ ಕುರಿತ ವಿಚಾರ ಹಾಗೂ ಎನ್‌ಆರ್‌ಸಿ ಅಂಥ ಸೂಕ್ಷ್ಮ ವಿಚಾರಗಳಲ್ಲಿ ವಿಶ್ವದ ಎದುರುಭಾರತದ ನಿಲುವನ್ನು ಮಂಡಿಸುವಲ್ಲಿ ಉತ್ತಮ ಕೆಲಸ ಮಾಡಿದ್ದಾರೆ.
‘ಇನ್ನು ಕೆಲವೇ ದಿನಗಳಲ್ಲಿ ಅವರು ತಮ್ಮ ಕೆಲಸ ಪ್ರಾರಂಭಿಸಲಿದ್ದಾರೆ’ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.