ನವದೆಹಲಿ: ಕನ್ನಡಿಗರಾದ ನ್ಯಾಯಮೂರ್ತಿ ರವಿ ವಿಜಯ್ ಕುಮಾರ್ ಮಳೀಮಠ ಅವರನ್ನು ಹಿಮಾಚಲ ಪ್ರದೇಶ ಹೈಕೋರ್ಟ್ನ ಹಂಗಾಮಿ ಮುಖ್ಯನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.
ಅಲ್ಲಿನ ಮುಖ್ಯ ನ್ಯಾಯಮೂರ್ತಿ ಲಿಂಗಪ್ಪ ನಾರಾಯಣ ಸ್ವಾಮಿ ಅವರ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನದ ಜವಾಬ್ದಾರಿಯನ್ನು ಅದೇ ಹೈಕೋರ್ಟ್ನ ಅತ್ಯಂತ ಹಿರಿಯ ನ್ಯಾಯಮೂರ್ತಿ ಎಂಬ ನೆಲೆಯಲ್ಲಿ ರವಿ ಮಳೀಮಠ ಅವರು ಜುಲೈ1ರಿಂದ ನಿರ್ವಹಿಸಲಿದ್ದಾರೆ ಎಂದು ಕಾನೂನು ಸಚಿವಾಲಯ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.