ADVERTISEMENT

‘ಪತ್ನಿಗೆ ತಿಳಿಯದೇ ಆಕೆಯ ಫೋನ್‌ ಕರೆ ರೆಕಾರ್ಡ್‌ ಮಾಡುವುದು ಖಾಸಗಿತನದ ಉಲ್ಲಂಘನೆ’

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಅಭಿಪ್ರಾಯ

ಪಿಟಿಐ
Published 13 ಡಿಸೆಂಬರ್ 2021, 15:37 IST
Last Updated 13 ಡಿಸೆಂಬರ್ 2021, 15:37 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಛತ್ತೀಸಗಢ: ಪತ್ನಿಯ ದೂರವಾಣಿ ಸಂಭಾಷಣೆಯನ್ನು ಆಕೆಗೆ ತಿಳಿಯದಂತೆ ರೆಕಾರ್ಡ್ ಮಾಡುವುದು ಆಕೆಯ ಖಾಸಗಿತನದ ಉಲ್ಲಂಘನೆಯಾಗುತ್ತದೆ ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಬಟಿಂಡಾ ಕೌಟುಂಬಿಕ ನ್ಯಾಯಾಲಯದ 2020ರ ಆದೇಶವನ್ನು ಪ್ರಶ್ನಿಸಿ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಲಿಸಾ ಗಿಲ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ತಮ್ಮಿಬ್ಬರ ನಡುವಿನ ಧ್ವನಿಮುದ್ರಿತ ಸಂಭಾಷಣೆಯುಳ್ಳ ಸಿಡಿಯನ್ನು ಸಲ್ಲಿಸಲು ಅವಕಾಶ ನೀಡಬೇಕು ಎಂದು ಪತಿ ಬಟಿಂಡಾ ಕೌಟುಂಬಿಕ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು. ಸಿ.ಡಿ ನೈಜವಾಗಿರಬೇಕು ಎಂಬ ಷರತ್ತಿನ ಮೇರೆಗೆ ನ್ಯಾಯಾಲಯವು ಅದನ್ನು ಸಲ್ಲಿಸಲು ಅವಕಾಶ ಮಾಡಿಕೊಟ್ಟಿತ್ತು. ಇದರ ವಿರುದ್ಧ ಮಹಿಳೆ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ADVERTISEMENT

ಈ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌ ಪತ್ನಿಗೆ ತಿಳಿಯದೆ ದೂರವಾಣಿ ಸಂಭಾಷಣೆಯನ್ನು ರೆಕಾರ್ಡ್ ಮಾಡುವುದು ಆಕೆಯ ಖಾಸಗಿತನದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅಭಿಪ್ರಾಯಪಟ್ಟಿದೆ.

"ಇದಲ್ಲದೆ, ಸಂಭಾಷಣೆ ಯಾವ ಸಂದರ್ಭಗಳಲ್ಲಿ ನಡೆಯಿತು ಅಥವಾ ಸಂಭಾಷಣೆಯನ್ನು ರೆಕಾರ್ಡ್ ಮಾಡುತ್ತಿದ್ದ ವ್ಯಕ್ತಿಯಿಂದ ಯಾವ ರೀತಿಯ ಪ್ರತಿಕ್ರಿಯೆ ಬಂದಿದೆ ಎಂಬುದರ ಕುರಿತು ಖಚಿತವಾಗಿ ಹೇಳಲಾಗುವುದಿಲ್ಲ. ಏಕೆಂದರೆ ಈ ಪ್ರಕರಣದಲ್ಲಿ ವಾದಿಯೊಬ್ಬರು ಸಂಭಾಷಣೆಗಳನ್ನು ರಹಸ್ಯವಾಗಿ, ಬೇಕೆಂದೇ ರೆಕಾರ್ಡ್ ಮಾಡಿದ್ದಾರೆ ಎಂಬುದು ಸ್ಪಷ್ಟವಾಗಿದೆ,’ ಎಂದು ಕೋರ್ಟ್‌ ಹೇಳಿತು.

2009 ರಲ್ಲಿ ದಂಪತಿ ವಿವಾಹವಾಗಿದ್ದರು. ಮಹಿಳೆಯಿಂದ ವಿಚ್ಛೇದನ ಕೋರಿ ಪತಿ 2017ರಲ್ಲಿ ಅರ್ಜಿ ಸಲ್ಲಿಸಿದ್ದರು. ದಂಪತಿಗೆ ಒಬ್ಬ ಮಗಳಿದ್ದಾಳೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.