ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ಭದ್ರತೆಗಾಗಿ ಕೆಂಪುಕೋಟೆಗೆ ಪ್ರವಾಸಿಗರ ಭೇಟಿಯನ್ನು ತಾತ್ಕಾಲಿವಾಗಿ ನಿರ್ಬಂಧಿಸಲಾಗಿದೆ ಎಂದು ಎಎಸ್‌ಐ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಇದರ ಜತೆಗೆ ಹಳೆಯ ದೆಹಲಿಯಲ್ಲಿರುವ ಯುನೆಸ್ಕೊ ವಿಶ್ವ ಪರಂಪರೆಯ ತಾಣವಾದ ಮೊಘಲ್ ಸ್ಮಾರಕವನ್ನೂ ಸೋಮವಾರ ರಾತ್ರಿ ಬಂದ್ ಮಾಡಲಾಗಿದ್ದು, ಬಿಗಿ ಭದ್ರತೆ ನಿಯೋಜಿಸಲಾಗಿದೆ. ಮುಂದಿನ ಆದೇಶದವರೆಗೂ ಪ್ರವಾಸಿಗರು ಭೇಟಿ ನೀಡುವಂತಿಲ್ಲ ಎಂದು ತಿಳಿಸಲಾಗಿದೆ.
ರೈತ ಮುಖಂಡರು ಮತ್ತು ಕೇಂದ್ರದ ನಡುವಿನ ಮಾತುಕತೆಯ ನಂತರ ಮಂಗಳವಾರ ರೈತರ ‘ದೆಹಲಿ ಚಲೋ’ ಮೆರವಣಿಗೆಯನ್ನು ತಡೆಯಲು ಗಡಿ ಪ್ರದೇಶಗಳಲ್ಲಿ ಬಹು ಪದರದ ಬ್ಯಾರಿಕೇಡ್‌ಗಳು, ಕಾಂಕ್ರೀಟ್ ಬ್ಲಾಕ್‌ಗಳು, ಕಬ್ಬಿಣದ ಮೊಳೆಗಳು ಮತ್ತು ಕಂಟೇನರ್‌ಗಳ ಗೋಡೆಗಳನ್ನು ನಿರ್ಮಿಸಿ ದೆಹಲಿಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.