ADVERTISEMENT

ಸಾಮಾಜಿಕ ಮಾಧ್ಯಮಗಳ ದುರ್ಬಳಕೆ ನಿಯಂತ್ರಣಕ್ಕೆ ಕಾನೂನು: ಜನವರಿ 15ರೊಳಗೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2019, 15:49 IST
Last Updated 22 ಅಕ್ಟೋಬರ್ 2019, 15:49 IST
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್   

ನವದೆಹಲಿ: ದ್ವೇಷದ ಭಾಷಣ, ಸುಳ್ಳು ಸುದ್ದಿ, ಅವಹೇಳನಾಕಾರಿ ಬರಹ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ದೇಶದ್ರೋಹಿ ಚಟುವಟಿಕೆಗಳನ್ನು ನಿಯಂತ್ರಿಸಲಿರುವಕಾನೂನುಗಳಬಗ್ಗೆ ಜನವರಿ 15ರೊಳಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಹೇಳಿದೆ.

ಸಾಮಾಜಿಕ ಮಾಧ್ಯಮದಲ್ಲಿನ ಖಾತೆಗಳ ಗೂಢ ಲಿಪೀಕರಣವನ್ನು ಶೇರ್ ಮಾಡಬೇಕೆಂಬ ಬೇಡಿಕೆಗೆ ಸಂಬಂಧಪಟ್ಟಿರುವ ಕೆಲವು ಪ್ರಕರಣಗಳು ಮದ್ರಾಸ್, ಬಾಂಬೆ ಮತ್ತು ಮಧ್ಯ ಪ್ರದೇಶ ಹೈಕೋರ್ಟ್‌ನಲ್ಲಿ ಬಾಕಿ ಇದೆ. ಆ ಎಲ್ಲ ಪ್ರಕರಣಗಳನ್ನು ಸುಪ್ರೀಂಕೋರ್ಟ್ ವರ್ಗಾವಣೆ ಮಾಡಿದೆ.

ಸುಪ್ರೀಂಕೋರ್ಟ್‌ಗೆ ಈ ಪ್ರಕರಣಗಳನ್ನು ವರ್ಗಾವಣೆ ಮಾಡಬೇಕು ಎಂದು ಫೇಸ್‌ಬುಕ್ ಮತ್ತು ವಾಟ್ಸ್‌ಆ್ಯಪ್ ಒತ್ತಾಯಿಸಿತ್ತು. ಸಾಮಾಜಿಕ ಮಾಧ್ಯಮಗಳಿಗೆ ಸಂಬಂಧಿಸಿದ ಎಲ್ಲ ಪ್ರಕರಣಗಳ ವಿಚಾರಣೆ ಜನವರಿ ಕೊನೆಯ ವಾರದಲ್ಲಿ ನಡೆಸಲಾಗುವುದು ಎಂದು ಸುಪ್ರೀಂಕೋರ್ಟ್ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.