ನವದೆಹಲಿ: ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಲು ಆಗ್ರಹಿಸಿ ನಾಮಪತ್ರ ಸಲ್ಲಿಸಿದ್ದ ಬಿಎಸ್‌ಎಫ್ ಮಾಜಿ ಯೋಧ ತೇಜ್ ಬಹದ್ದೂರ್ ಯಾದವ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ತೇಜ್ ಬಹದ್ದೂರ್ ಮೇ. 6ರಂದು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಆಅರ್ಜಿಯನ್ನು ನ್ಯಾಯಾಲಯವಜಾ ಮಾಡಿದೆ.
ನಾಮಪತ್ರ ತಿರಸ್ಕರಿಸಲು ಕಾರಣವೇನು?
ಸರ್ಕಾರಿ ನೌಕರರೊಬ್ಬರು ಸೇವೆಯಿಂದ ವಜಾಗೊಂಡಿದ್ದರೆ,ವಜಾಗೊಂಡಿದ್ದಕ್ಕೆ ಕಾರಣ ಏನು ಎಂಬುದನ್ನು ಚುನಾವಣಾ ಆಯೋಗಕ್ಕೆ ಹೇಳಬೇಕಿದೆ.ದೇಶದ ಬಗ್ಗೆ ಅಪ್ರಾಮಾಣಿಕತೆ ಅಥವಾ ಭ್ರಷ್ಟಾಚಾರದಿಂದಾಗಿ ತಾನು ಸೇವೆಯಿಂದ ವಜಾಗೊಂಡಿಲ್ಲ ಎಂದು ತೋರಿಸುವ ಪ್ರಮಾಣಪತ್ರವನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕಿದೆ.
ಆದರೆ ತೇಜ್ ಬಹದ್ದೂರ್ ನಾಮಪತ್ರ ಸಲ್ಲಿಸುವಾಗ ಈ ದಾಖಲೆಗಳನ್ನು ಸಲ್ಲಿಸಿಲ್ಲ. ಹಾಗಾಗಿ ಅವರ ನಾಮಪತ್ರ ತಿರಸ್ಕೃತವಾಗಿತ್ತು.
2107ರಲ್ಲಿ ಬಿಎಸ್‌ಎಫ್‌ನಲ್ಲಿ ಕಳಪೆ ಆಹಾರ ನೀಡಲಾಗುತ್ತಿದೆ ಎಂದು ಹೇಳಿ ತೇಜ್ ಬಹದ್ದೂರ್ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದರು. ಈ ಕಾರಣದಿಂದಾಗಿ ಇವರನ್ನು ಸೇನೆಯಿಂದ ವಜಾಗೊಳಿಸಲಾಗಿತ್ತು.
ಇದನ್ನೂ ಓದಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.