ADVERTISEMENT

ಏರ್‌ಸೆಲ್‌ ಮ್ಯಾಕ್ಸಿಸ್‌ ಹಗರಣ | ಪಿ. ಚಿದಂಬರಂ ವಿಚಾರಣೆಗೆ ದೆಹಲಿ ಹೈಕೋರ್ಟ್ ತಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ನವೆಂಬರ್ 2024, 7:19 IST
Last Updated 20 ನವೆಂಬರ್ 2024, 7:19 IST
ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ
ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ   

ನವದೆಹಲಿ: ಏರ್‌ಸೆಲ್‌–ಮ್ಯಾಕ್ಸಿಸ್‌ ಮತ್ತು ಐಎನ್‌ಎಕ್ಸ್‌ ಮೀಡಿಯಾ ಹಗರಣದ ಜೊತೆ ನಂಟಿನ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರ ವಿಚಾರಣೆಗೆ ದೆಹಲಿ ಹೈಕೋರ್ಟ್ ತಡೆ ನೀಡಿದೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.

ಏರ್‌ಸೆಲ್‌ ಮ್ಯಾಕ್ಸಿಸ್‌ ಹಗರಣ ಮತ್ತು ಐಎನ್‌ಎಕ್ಸ್‌ ಮೀಡಿಯಾ ಹಗರಣದ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಎರಡು ಪ್ರಕರಣ ಮತ್ತು ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿ ಇ.ಡಿ ದಾಖಲಿಸಿರುವ ಎರಡು ಪ್ರಕರಣಗಳಲ್ಲಿ ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ಆರೋಪಿಯಾಗಿದ್ದಾರೆ.

2006ರಲ್ಲಿ ಈ ಹಗರಣ ನಡೆದಿದ್ದು, ಆಗ ಚಿದಂಬರಂ ವಿತ್ತ ಸಚಿವರಾಗಿದ್ದರು. ಪ್ರಕರಣ ಸಂಬಂಧ ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ಜೈಲು ಶಿಕ್ಷೆಯನ್ನೂ ಅನುಭವಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.