ಗುವಾಹಟಿ: ‘ರೀಮಲ್‘ ಚಂಡಮಾರುತದ ಪರಿಣಾಮ ಮಿಜೋರಾಂ ಮತ್ತು ಅಸ್ಸಾಂನಲ್ಲಿ ಭಾರಿ ಮಳೆಯಾಗಿದೆ. ಮಳೆ ಸಂಬಂಧಿಸಿದ ಅವಘಡಗಳಲ್ಲಿ 24 ಜನರು ಮೃತಪಟ್ಟಿದ್ದು, ಏಳು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಮಿಜೋರಾಂ ಮತ್ತು ಅಸ್ಸಾಂನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ.
ಮಿಜೋರಾಂನ ಐಜ್ವಾಲ್ ಜಿಲ್ಲೆಯ ಮೆಲ್ತುಮ್‌ನಲ್ಲಿ ಕಲ್ಲಿನ ಕ್ವಾರಿ ಕುಸಿದ ಪರಿಣಾಮ 15 ಮಂದಿ ಮೃತಪಟ್ಟಿದ್ದು, ಏಳು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಅಸ್ಸಾಂನ ಮೋರಿಗಾಂವ್ ಮತ್ತು ಲಖಿಂಪುರದಲ್ಲಿ 17 ವರ್ಷದ ವಿದ್ಯಾರ್ಥಿ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಸೋನಿತ್‌ಪುರದಲ್ಲಿ ಇಂದು ಬೆಳಿಗ್ಗೆ ಶಾಲಾ ಬಸ್ ಮೇಲೆ ಮರ ಉರುಳಿದೆ. ಈ ವೇಳೆ ಬಸ್‌ನಲ್ಲಿದ್ದ 17 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ರೀಮಲ್ ಚಂಡಮಾರುತದಿಂದಾಗಿ ಅಸ್ಸಾಂನ ಮೋರಿಗಾಂವ್ ಜಿಲ್ಲೆಯ ಧುಪ್ಗುರಿಯಲ್ಲಿ ಚಲಿಸುತ್ತಿದ್ದ ಆಟೊದ ಮೇಲೆ ಮರ ಬಿದ್ದು ವಿದ್ಯಾರ್ಥಿ ಕೌಶಿಕ್ ಅಂಫಿ ಎಂಬುವವರು ಸ್ಥಳದಲ್ಲೇ ಮೃತಪಟ್ಟರೆ, ಲಖಿಂಪುರ ಜಿಲ್ಲೆಯ ಗೆರುಕಾಮುಖ್‌ನಲ್ಲಿ ಎನ್‌ಎಚ್‌ಪಿಸಿ ಯೋಜನೆಯ ಕೆಲಸಗಾರರೊಬ್ಬರು ಭೂಕುಸಿತದಲ್ಲಿ ಮೃತಪಟ್ಟಿದ್ದಾರೆ.
ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅಧಿಕಾರಿಗಳೊಂದಿಗೆ ಮಾತನಾಡಿ ಶೀಘ್ರ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.