ಅಹಮದಾಬಾದ್: ಪ್ರಧಾನಿ ಅವರ ವಿದ್ಯಾರ್ಹತೆ ಕುರಿತ ಹೇಳಿಕೆಗೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆ ಕುರಿತು ವಿಚಾರಣಾ ನ್ಯಾಯಾಲಯದ ಸಮನ್ಸ್ ಅನ್ನು ಪ್ರಶ್ನಿಸಿ ಎಎಪಿ ನಾಯಕರಾದ ಅರವಿಂದ ಕೇಜ್ರಿವಾಲ್ ಹಾಗೂ ಸಂಜಯ್ ಸಿಂಗ್ ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಮೀರ್ ದವೆ ಅವರು ಎಎಪಿ ಮುಖಂಡರ ಅರ್ಜಿಯನ್ನು ಮತ್ತೊಬ್ಬ ನ್ಯಾಯಾಧೀಶರಿಗೆ ವರ್ಗಾಯಿಸುವಂತೆ ಮಂಗಳವಾರ ಸೆಷನ್ಸ್ ಕೋರ್ಟ್‌ಗೆ ನಿರ್ದೇಶನ ನೀಡಿದ್ದಾರೆ.
ಮತ್ತೊಬ್ಬ ನ್ಯಾಯಾಧೀಶರು ಈ ವಿಷಯ ಕುರಿತಂತೆ ಇನ್ನು 10 ದಿನಗಳಲ್ಲಿ ನಿರ್ಧಾರ ಪ್ರಕಟಿಸಲಿದ್ದಾರೆ ಎಂದೂ ಅವರು ಹೇಳಿದ್ದಾರೆ.
ಇದೇ 31ರಂದು ಮೆಟ್ರೊಪಾಲಿಟನ್ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯಬೇಕಿದೆ. ಆದರೆ, ವಿಚಾರಣೆ ನಡೆಸುತ್ತಿರುವ ಉಸ್ತುವಾರಿ ನ್ಯಾಯಾಧೀಶರು ರಜೆಯಲ್ಲಿದ್ದು, ಸೆಪ್ಟೆಂಬರ್ 16ಕ್ಕೆ ಪ್ರಕರಣವನ್ನು ಕಾಯ್ದಿರಿಸಿದ್ದರು. ಹಾಗಾಗಿ, ಎಎಪಿಯ ಇಬ್ಬರು ನಾಯಕರು ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.