ನವದೆಹಲಿ: ರಫೇಲ್ ಒಪ್ಪಂದದ ಬಗ್ಗೆ ಸಿಬಿಐ ತನಿಖೆ ನಡೆಸಲು ಮುಂದಾಗಿದ್ದಕ್ಕೆ ಭಯಗೊಂಡು ಮೋದಿ ಸರ್ಕಾರ ರಾತ್ರೋರಾತ್ರಿ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರಿಗೆ ಕಡ್ಡಾಯ ರಜೆ ನೀಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ವರ್ಮಾ ಅವರನ್ನು ಸಿಬಿಐ ನಿರ್ದೇಶಕ ಸ್ಥಾನದಿಂದ ಪದಚ್ಯುತಗೊಳಿಸಿದ್ದು ಭಾರತದಸಂವಿಧಾನಕ್ಕೆ ಅವಮಾನ ಮಾಡಿದಂತೆ ಎಂದು ರಾಹುಲ್ ಹೇಳಿದ್ದಾರೆ.
ಅಲೋಕ್ ವರ್ಮಾ ಅವರನ್ನು ರಾತ್ರಿ 2 ಗಂಟೆಗೆ ನಿರ್ದೇಶಕ ಸ್ಥಾನದಿಂದ ಕಿತ್ತೊಗೆಯಲಾಗಿದೆ. ರಫೇಲ್ ಒಪ್ಪಂದದಲ್ಲಿ ನಡೆದ ಭ್ರಷ್ಟಾಚರಾದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪಾತ್ರ ಏನು ಎಂಬುದರ ಬಗ್ಗೆ ತನಿಖೆಗ ನಡೆಸಲು ಸಿಬಿಐ ಮುಂದಾಗಿರುವುದೇ ಇದಕ್ಕೆ ಕಾರಣ. ಅಲೋಕ್ ವರ್ಮಾ ಅವರ ಸೇವಾ ಅವಧಿ ಜನವರಿವರೆಗೆ ಇರುವಾಗ ಅವರನ್ನು ಈ ಸ್ಥಾನದಿಂದ ತೆಗೆದು ಹಾಕಿರುವುದು ಯಾಕೆ?ಎಂದು ರಾಹುಲ್ ಪ್ರಶ್ನಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.