ADVERTISEMENT

ದೇಶದಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ನಡೆಯುವುದು ಉತ್ತಮ: ರಾಜನಾಥ್‌ ಸಿಂಗ್‌

ಪಿಟಿಐ
Published 30 ಮೇ 2024, 9:40 IST
Last Updated 30 ಮೇ 2024, 9:40 IST
ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌
ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌   

ಕುಶಿನಗರ(ಉತ್ತರ ಪ್ರದೇಶ): ದೇಶದಲ್ಲಿ ವಿವಿಧ ಹಂತಗಳಲ್ಲಿ ಚುನಾವಣೆಗಳು ನಡೆಯವುದು ಉತ್ತಮವಾಗಿಲ್ಲ. ಮುಂಬರುವ ದಿನಗಳಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ‘ಯನ್ನು ಜಾರಿಗೆ ತರಲಾಗುವುದು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಗುರುವಾರ ಹೇಳಿದ್ದಾರೆ.

ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಅವರು, ದೇಶದಾದ್ಯಂತ ಏಕಕಾಲದಲ್ಲಿ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳನ್ನು ನಡೆಸುವುದು ಒಳ್ಳೆಯದು ಎಂದು ಪ್ರಧಾನಿ ಮೋದಿ ಹಾಗೂ ಬಿಜೆಪಿ ನಂಬಿಕೆ ಹೊಂದಿದೆ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಾಯಕತ್ವದಲ್ಲಿ ದೇಶವನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯುತ್ತಿದ್ದಾರೆ. ಇದೀಗ ಭಾರತ ತನ್ನ ನಿಲುವನ್ನು ವ್ಯಕ್ತಪಡಿಸಿದಾಗ ಉಳಿದ ದೇಶಗಳು ಆಲಿಸುತ್ತವೆ. ಪಾಕಿಸ್ತಾನದ ರಾಜಕಾರಣಿಗಳೇ ಮೋದಿ ಅವರ ನಾಯಕತ್ವವನ್ನು ಹೊಗಳುತ್ತಾರೆ. ಆದರೆ ಕಾಂಗ್ರೆಸ್‌ ಮತ್ತು ಸಮಾಜವಾದಿ ಪ‌ಕ್ಷಗಳ ನಾಯಕರಿಗೆ ಇದು ಅರ್ಥವಾಗಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ವಿಶ್ವದ ಐದನೇ ಆರ್ಥಿಕ ದೇಶವಾಗಿ ಭಾರತ ಹೊರಹೊಮ್ಮಿದೆ. ಪ್ರಧಾನಿ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಭಾರತ 2027ರ ಹೊತ್ತಿಗೆ ವಿಶ್ವದ ಮೂರನೇ ಆರ್ಥಿಕ ರಾಷ್ಟ್ರವಾಗಲಿದೆ. 2047ರ ಹೊತ್ತಿಗೆ ಭಾರತ ವಿಶ್ವದ ಅತಿ ದೊಡ್ಡ ಆರ್ಥಿಕತೆ ಹೊಂದಿದ ದೇಶವಾಗಲಿದೆ ಎಂದು ಸಿಂಗ್‌ ಹೇಳಿದ್ದಾರೆ.

ಲೋಕಸಭಾ ಚುನಾವಣೆಯ ಏಳನೇ ಹಂತವು ಜೂನ್‌ 1ರಂದು ನಡೆಯಲಿದ್ದು, ಅದೇ ದಿನ ಕುಶಿನಗರದಲ್ಲಿ ಮತದಾನ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.