ತಿರುವನಂತಪುರ:ಕೇರಳದಲ್ಲಿ ಭಾರಿ ಮಳೆಯಿಂದ ಪ್ರವಾಹ ಉಂಟಾಗಿ ಸಂಕಷ್ಟದಲ್ಲಿದ್ದ 17 ಸಾವಿರ ಜನರನ್ನು ಭಾರತೀಯ ನೌಕಾಪಡೆ ರಕ್ಷಿಸಿದೆ ಎಂದು ನೌಕಾಪಡೆ ಅಡ್ಮಿರಲ್ ಸುನಿಲ್ ಲಾಂಬಾ ಹೇಳಿದ್ದಾರೆ.
ಎರ್ನಾಕುಲಂ ಜಿಲ್ಲೆಯ ಮಟ್ಟಿನಾಕಂ ಗ್ರಾಮಕ್ಕೆ ಭೇಟಿ ನೀಡಿ, ಪ್ರವಾಹ ರಕ್ಷಣಾ ಕಾರ್ಯಾಚರಣೆ, ಪರಿಹಾರ ಮತ್ತು ಪುನರ್ವಸತಿ ಪ್ರಕ್ರಿಯೆಯನ್ನು ಪರಿಶೀಲಿಸಿದ ವೇಳೆ ಅವರು ಮಾಹಿತಿ ನೀಡಿದರು.
₹25 ಲಕ್ಷ ಮೌಲ್ಯದ ಪರಿಹಾರ ಸಾಮಗ್ರಿ
ಇದೇ ವೇಳೆ, ಪ್ರವಾಹ ಸಂತ್ರಸ್ತರಿಗೆ ನೌಕಾಪಡೆಯ ಕ್ಷೇಮಾಭಿವೃದ್ಧಿ ಸಂಘದಿಂದ ನೀಡಿದ್ದ ₹25 ಲಕ್ಷ ಮೌಲ್ಯದ ಪರಿಹಾರ ಸಾಮಗ್ರಿಗಳನ್ನು ಅವರು ಹಸ್ತಾಂತರಿಸಿದರು.
ಒಂದು ದಿನದ ವೇತನ
ಸಂಕಷ್ಟದಲ್ಲಿರುವ ಸಂತ್ರಸ್ತರ ನೆರವಿಗೆ ಮುಂದಾಗಿರುವ ನಮ್ಮ ನೌಕಾಪಡೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಒಂದು ದಿನದ ವೇತನನ್ನು ದೇಣಿಗೆ ನೀಡಿದ್ದೇವೆ. ಈ ದೇಣಿಗೆಯ ಚೆಕ್‌ಅನ್ನು ಕೇರಳ ಮುಖ್ಯಮಂತ್ರಿ ಅವರಿಗೆ ನೀಡುತ್ತೇವೆ ಎಂದು ಸುನಿಲ್ ಲಾಂಬಾ ತಿಳಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.