ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉದ್ವಿಗ್ನ ಸ್ಥಿತಿ ಮುಂದುವರಿದಿದೆ. ಶ್ರೀನಗರ ಜಿಲ್ಲೆಯಲ್ಲಿ ಸಿಆರ್ ಪಿಸಿ 144ನೇ ಕಲಂ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಪಿಡಿಪಿ ನಾಯಕಿ ಮೆಹಬೂಬ ಮುಫ್ತಿ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ.
ಸೋಮವಾರ ಮಧ್ಯರಾತ್ರಿ 12 ಗಂಟೆಯಿಂದ ನಿಷೇಧಾಜ್ಞೆ ಜಾರಿಯಾಗಿದ್ದು ಮುಂದಿನ ಆದೇಶದವರೆಗೆ ಚಾಲ್ತಿಯಲ್ಲಿರುತ್ತದೆ. ಸಾರ್ವಜನಿಕ ಸಂಚಾರದ ಮೇಲೆ ನಿರ್ಬಂಧ ವಿಧಿಸಲಾಗಿದೆ. ಸರ್ಕಾರಿ ಕಚೇರಿಗಳು ಹಾಗೂ ಶಿಕ್ಷಣ ಸಂಸ್ಥೆಗಳು ಬಾಗಿಲು ಹಾಕಿವೆ. ಸಾರ್ವಜನಿಕ ಸಭೆಗಳು ಮತ್ತು ಮೆರವಣಿಗೆಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ.
ತುರ್ತು ಸೇವೆಗಳಿಗೆ ನಿಯೋಜಿಸಲಾಗಿರುವ ಅಧಿಕಾರಿಗಳ ಗುರುತಿನ ಚೀಟಿಗಳನ್ನೇ ಸಂಚಾರಿ ಪಾಸುಗಳಾಗಿ ಭದ್ರತಾ ಪಡೆಗಳು ಪರಿಗಣಿಸುತ್ತಿವೆ. ಇಷ್ಟೆಲ್ಲಾ ಇದ್ದರೂ ಸರ್ಕಾರ ಅಧಿಕೃತವಾಗಿ ಕರ್ಫ್ಯು ವಿಧಿಸಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.