ಪಾಟ್ನಾ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯೊಂದಿಗೆ ನಂಟು ಹೊಂದಿದ ಆರೋಪದ ಮೇಲೆ ಜಾರ್ಖಂಡ್‌ನ ನಿವೃತ್ತ ಪೊಲೀಸ್ ಅಧಿಕಾರಿ ಸೇರಿದಂತೆ ಇಬ್ಬರನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ.
ಈ ಮೂಲಕ ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಭಯೋತ್ಪಾದಕ ಗುಂಪಿನ ಸಂಚನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪಾಟ್ನಾದ ಫುಲ್ವಾರಿ ಶರೀಫ್ ಪ್ರದೇಶದಲ್ಲಿ ಬುಧವಾರ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಮಾಜಿ ಪೊಲೀಸ್ ಅಧಿಕಾರಿ ಮೊಹಮ್ಮದ್ ಜಲಾವುದ್ದೀನ್ ಮತ್ತು ಅಥರ್ ಪರ್ವೇಜ್ ಎಂದು ಗುರುತಿಸಲಾಗಿದ್ದು, ಅವರಿಬ್ಬರು ಪಿಎಫ್‌ಐ ಜೊತೆ ನಂಟು ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
2001-02ರಲ್ಲಿ ಸಿಮಿ ಸಂಘಟನೆ ನಿಷೇಧದ ನಂತರ ಬಿಹಾರದಲ್ಲಿ ಹಲವಾರು ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಪರ್ವೇಜ್ ಅವರ ಕಿರಿಯ ಸೋದರ ಜೈಲು ಪಾಲಾಗಿದ್ದರು ಎಂದು ಎಎಸ್‌ಪಿ ಮನೀಶ್ ಕುಮಾರ್ ತಿಳಿಸಿದ್ದಾರೆ.
ಬಂಧಿತರಿಂದ ಇಸ್ಲಾಮಿಕ್ ಭಯೋತ್ಪಾದನೆಗೆ ಸಂಬಂಧಿಸಿದಂತೆ ಹಲವಾರು ದಾಖಲೆಗಳನ್ನು ವಶಪಡಿಸಲಾಗಿದೆ ಎಂದು ಎಎಸ್‌ಪಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.