ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭಾನುವಾರ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೊಹಮ್ಮದ್ ಶಫಿ ಹತ್ಯೆಯಾದ ನಿವೃತ್ತ ಪೊಲೀಸ್ ಅಧಿಕಾರಿ. ಇಂದು ಮುಂಜಾನೆ ಮಸೀದಿಯಲ್ಲಿ ಅಜಾನ್ ಪ್ರಾರ್ಥನೆ ಮಾಡುತ್ತಿದ್ದಾಗ ಭಯೋತ್ಪಾದಕರು ಶಫಿ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಎಂದು ಕಾಶ್ಮೀರ ವಲಯ ಪೊಲೀಸರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.