ADVERTISEMENT

ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ರೇವಂತ್‌ ರೆಡ್ಡಿ ಪ್ರಮಾಣ ವಚನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಡಿಸೆಂಬರ್ 2023, 8:15 IST
Last Updated 7 ಡಿಸೆಂಬರ್ 2023, 8:15 IST
<div class="paragraphs"><p>ರೇವಂತ್‌ ರೆಡ್ಡಿ</p></div>

ರೇವಂತ್‌ ರೆಡ್ಡಿ

   

(ಪಿಟಿಐ ಚಿತ್ರ)

ಹೈದರಾಬಾದ್‌: ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್‌ ರೆಡ್ಡಿ ಇಂದು (ಗುರುವಾರ) ಪ್ರಮಾಣ ವಚನ ಸ್ವೀಕರಿಸಿದರು.

ADVERTISEMENT

ಇಲ್ಲಿನ ಎಲ್‌.ಬಿ. ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ತೆಲಂಗಾಣದ ಗವರ್ನರ್ ತಮಿಳಿಸೈ ಸೌಂದರರಾಜನ್ ಪ್ರತಿಜ್ಞಾವಿಧಿ ಬೋಧಿಸಿದರು. ಭಟ್ಟಿ ವಿಕ್ರಮಾರ್ಕ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತಿತರರು ಸಮಾರಂಭದಲ್ಲಿ ಭಾಗಿಯಾದರು.

ಕಾರ್ಯಕ್ರಮದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.