ADVERTISEMENT

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕೊಲೆ: 11ನೇ ದಿನಕ್ಕೆ ಕಿರಿಯ ವೈದ್ಯರ ಉಪವಾಸ

ಆರ್.ಜಿ.ಕರ್‌ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಪ್ರಕರಣ

ಪಿಟಿಐ
Published 15 ಅಕ್ಟೋಬರ್ 2024, 5:19 IST
Last Updated 15 ಅಕ್ಟೋಬರ್ 2024, 5:19 IST
<div class="paragraphs"><p>ಪ್ರತಿಭಟನೆ</p></div>

ಪ್ರತಿಭಟನೆ

   

ಕೋಲ್ಕತ್ತ: ಆರ್.ಜಿ.ಕರ್‌ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಕ್ಕೆ ಆಗ್ರಹಿಸಿ ವೈದ್ಯರು ನಡೆಸುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹ ಮಂಗಳವಾರ 11ನೇ ದಿನಕ್ಕೆ ಕಾಲಿರಿಸಿದೆ.

ಉಪವಾಸ ನಿರತ ವೈದ್ಯರಲ್ಲಿ ಮತ್ತಿಬ್ಬರ ಆರೋಗ್ಯ ಹದಗೆಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ಉಪವಾಸನಿರತ 12 ವೈದ್ಯ ಸಂಘಟನೆಗಳ ಪ್ರತಿನಿಧಿಗಳು ಮತ್ತು ಮುಖ್ಯ ಕಾರ್ಯದರ್ಶಿ ಮನೋಜ್ ಪಂತ್ ಅವರ ನಡುವೆ ಸೋಮವಾರ ಸ್ವಾಸ್ಥ್ಯ ಭವನದಲ್ಲಿ ಸಭೆ ನಡೆಯಿತು. ಆದರೆ ಈ ಸಭೆಯಲ್ಲಿ ಯಾವುದೇ ಫಲಿತಾಂಶ ಬರಲಿಲ್ಲ.

ರಾಜ್ಯ ದಲ್ಲಿ ಅ.15ರಂದು ‘ದುರ್ಗಾ ಪೂಜಾ ಮಹೋತ್ಸವ’ ಇದೆ. ಆದರೆ, ಅದೇ ದಿನ ವೈದ್ಯರು ಸಮಾವೇಶ ಹಮ್ಮಿಕೊಂಡಿದ್ದಾರೆ. ಪೂಜಾ ಮಹೋತ್ಸವದ ಹಿನ್ನೆಲೆಯಲ್ಲಿ ಸಮಾವೇಶ ರದ್ದುಗೊಳಿಸ ಬೇಕೆಂದು ವೈದ್ಯರ ಜಂಟಿ ವೇದಿಕೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಮನೋಜ್‌ ಪಂತ್‌ ಆಗ್ರಹಿಸಿದ್ದಾರೆ.

ಆದರೆ, ಪಂತ್‌ ಅವರ ಈ ಆಗ್ರಹಕ್ಕೆ ವೈದ್ಯರ ಜಂಟಿ ವೇದಿಕೆ ಬೇಸರ ವ್ಯಕ್ತಪಡಿಸಿದೆ. ಕಿರಿಯ ವೈದ್ಯರು ಆಮರಣಾಂತ ಉಪವಾಸ ಮಾಡುತ್ತಿದ್ದರೂ ಸರ್ಕಾರ ಹಬ್ಬದ ಆಚರಣೆಗೆ ಆದ್ಯತೆ ನೀಡಿದೆ ಎಂದು ವೇದಿಕೆ ಅಸಮಾಧಾನ ವ್ಯಕ್ತಪಡಿಸಿದೆ.

ರಾಜಭವನಕ್ಕೆ ಪ್ರತಿಭಟನಾ ರ‍್ಯಾಲಿ: ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಖಂಡಿಸಿ ಉಪವಾಸ ಸತ್ಯಾಗ್ರಹ ನಡೆಯುತ್ತಿರುವ ನಡುವೆಯೂ ಕಿರಿಯ ವೈದ್ಯರು ಸೋಮವಾರ ರಾಜಭವನಕ್ಕೆ ಪ್ರತಿಭಟನಾ ರ‍್ಯಾಲಿ ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.