ADVERTISEMENT

ಮೋದಿ ಕಾರ್ಯಕ್ರಮ: ಸಂಗೀತ ಸಂಯೋಜಕ ಬೆಂಗಳೂರಿನ ರಿಕಿ ಕೇಜ್‌ಗೆ ವೈಟ್‌ಹೌಸ್‌ನಿಂದ ಆಹ್ವಾನ

ಅಮೆರಿಕದ ಅಧ್ಯಕ್ಷರ ನಿವಾಸ ವೈಟ್‌ಹೌಸ್‌ನಲ್ಲಿ ‍ಪ್ರಧಾನಿ ಮೋದಿ ಅವರಿಗೆ ಅದ್ಧೂರಿ ಸ್ವಾಗತ ಹಾಗೂ ಔತಣಕೂಟ ಸಮಾರಂಭ ಗುರುವಾರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಜೂನ್ 2023, 13:06 IST
Last Updated 20 ಜೂನ್ 2023, 13:06 IST
ರಿಕಿ ಕೇಜ್‌
ರಿಕಿ ಕೇಜ್‌   

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನಾಲ್ಕು ದಿನಗಳ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಈ ವೇಳೆ ಅವರನ್ನು ವೈಟ್‌ಹೌಸ್‌ಗೆ ಸ್ವಾಗತಿಸಲು ಯುಎಸ್ ಅಧ್ಯಕ್ಷ ಜೋ ಬೈಡನ್ ದಂಪತಿ ಔತಣ ಕೂಟವೂ ಒಳಗೊಂಡಂತೆ ಅದ್ಧೂರಿ ಕಾರ್ಯಕ್ರಮ ಆಯೋಜಿಸಿದ್ದಾರೆ.

ವಿಶೇಷವೆಂದರೆ ಈ ಕಾರ್ಯಕ್ರಮಕ್ಕೆ ಬೆಂಗಳೂರು ಮೂಲದ ಸಂಗೀತ ಸಂಯೋಜಕ ಹಾಗೂ ಮೂರು ಬಾರಿ ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿ ಪುರಷ್ಕೃತ ರಿಕಿ ಕೇಜ್ ಅವರಿಗೂ ಆಹ್ವಾನ ಬಂದಿದೆ.

ಈ ವಿಷಯವನ್ನು ಸ್ವತಃ ರಿಕಿ ಕೇಜ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು ಸಂತಸ ವ್ಯಕ್ತಪಡಿಸಿದ್ದಾರೆ.

ADVERTISEMENT

‘ವೈಟ್‌ಹೌಸ್‌ನಿಂದ ನನಗೆ ಆಮಂತ್ರಣ ಬಂದಿದೆ. ತುಂಬಾ ಸಂತೋಷವಾಗಿದೆ. ಈ ಗುರುವಾರ ಕಾರ್ಯಕ್ರಮ ಇದೆ’ ಎಂದು ಹೇಳಿದ್ದಾರೆ.

ರಿಕಿ ಕೇಜ್ ಅವರು ನಾಲ್ಕು ವರ್ಷಗಳಿಂದ ವಿಶ್ವಸಂಸ್ಥೆಯ ಯುಎನ್‌ಸಿಸಿಡಿ ಜೊತೆ ಕಾರ್ಯನಿರ್ವಹಿಸುತ್ತಿದ್ದಾರೆ. ಮಹಿಳೆಯರು ಭೂ ಒಡೆತನದ ಹಕ್ಕು ಹೊಂದಬೇಕು ಎಂಬ #HerLand campaign ಅಭಿಯಾನ ಆರಂಭಿಸಿದ್ದಾರೆ. ಈ ಮೂಲಕ ಅವರು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ.

ಅಮೆರಿಕ ಪ್ರವಾಸದಲ್ಲಿ ಪ್ರಧಾನಿ ಮೋದಿ ನ್ಯೂಯಾರ್ಕ್ ಮತ್ತು ವಾಷಿಂಗ್ಟನ್ ಡಿಸಿಯಲ್ಲಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇದು ವಿಶ್ವಸಂಸ್ಥೆಯಲ್ಲಿ ಯೋಗ ದಿನಾಚರಣೆಯನ್ನು ಒಳಗೊಂಡಿರಲಿದೆ ಎಂದು ತಿಳಿಸಿದೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ಪ್ರಧಾನಿ ಮಾತುಕತೆ ನಡೆಸಲಿದ್ದಾರೆ. ಅಮೆರಿಕ ಕಾಂಗ್ರೆಸ್‌ನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.