ಮುಂಬೈ: ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಅಹಮದಾಬಾದ್‌ನಿಂದ ಮುಂಬೈಗೆ ತೆರಳುತ್ತಿದ್ದ ಸಂದರ್ಭ, ಮಹಾರಾಷ್ಟ್ರದ ಪಾಲ್ಘರ್ ಬಳಿ ಅವರ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಸೈರಸ್ ಮಿಸ್ತ್ರಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಪೀಯೂಷ್ ಗೋಯಲ್, ಹರ್ದೀಪ್ ಸಿಂಗ್ ಪುರಿ, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವಿಸ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಸೈರಸ್ ಮಿಸ್ತ್ರಿಯವರ ಅಕಾಲಿಕ ನಿಧನದಿಂದ ಆಘಾತವಾಗಿದೆ. ಅವರು ಭಾರತದ ಆರ್ಥಿಕತೆಯಲ್ಲಿ ನಂಬಿಕೆ ಇಟ್ಟಿದ್ದ ಭರವಸೆಯ ಉದ್ಯಮಿಯಾಗಿದ್ದರು. ಅವರ ನಿಧನದಿಂದ ವಾಣಿಜ್ಯ ಮತ್ತು ಉದ್ಯಮ ಲೋಕಕ್ಕೆ ದೊಡ್ಡ ನಷ್ಟವಾಗಿದೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ಸಂತಾಪ. ಅವರ ಆತ್ಮಕೆ ಶಾಂತಿ ಸಿಗಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ಧಾರೆ.
ಪಾಲ್ಘರ್ ಬಳಿ ಅಪಘಾತದಲ್ಲಿ ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರ ನಿಧನದ ಬಗ್ಗೆ ತಿಳಿದು ಆಘಾತ ಮತ್ತು ತೀವ್ರ ನೋವಾಗಿದೆ. ಅವರ ಕುಟುಂಬ, ಸ್ನೇಹಿತರು ಮತ್ತು ಸಹೋದ್ಯೀಗಿಗಳಿಗೆ ನನ್ನ ಸಂತಾಪಗಳು ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವಿಸ್ ಟ್ವೀಟ್ ಮಾಡಿದ್ದಾರೆ.
ಸೈರಸ್ ಮಿಸ್ತ್ರಿ ಅವರ ಹಠಾತ್ ನಿಧನದಿಂದ ತೀವ್ರ ದುಃಖ ಮತ್ತು ಆಘಾತವಾಗಿದೆ. ಭಾರತೀಯ ಉದ್ಯಮ ಕ್ಷೇತ್ರವು ತನ್ನ ಹೊಳೆಯುವ ನಕ್ಷತ್ರಗಳಲ್ಲಿ ಒಂದನ್ನು ಕಳೆದುಕೊಂಡಿದೆ. ಭಾರತದ ಆರ್ಥಿಕ ಪ್ರಗತಿಗೆ ಅವರು ನೀಡುವ ಕೊಡುಗೆಗಳು ಯಾವಾಗಲೂ ನೆನಪಿನಲ್ಲಿ ಉಳಿಯುತ್ತವೆ.ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ಎಂದು ಸಚಿವ ಪೀಯೂಷ್ ಗೋಯಲ್ ಹೇಳಿದ್ದಾರೆ.
ರಸ್ತೆ ಅಪಘಾತದಲ್ಲಿ ಟಾಟಾ ಸನ್ಸ್ ಸಂಸ್ಥೆಯ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ನಿಧನ ಸುದ್ದಿ ಕೇಳಿ ಅತೀವ ನೋವುಂಟಾಗಿದೆ. ಅವರ ಕುಟುಂಬ ಮತ್ತು ಮಿತ್ರರಿಗೆ ಹೃದಯಪೂರ್ವಕ ಸಂತಾಪಗಳು ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಟ್ವೀಟ್ ಮಾಡಿದ್ದಾರೆ.
ಉದ್ಯಮಿ ನವೀನ್ ಜಿಂದಾಲ್, ಟಿಆರ್‌ಎಸ್‌ನ ಕೆ.ಟಿ. ರಾಮರಾಂ ಮುಂತಾದವರು ಸಂತಾಪ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.