ಡೆಹ್ರಾಡೂನ್: ರಸ್ತೆ ಗುಂಡಿ ತಪ್ಪಿಸಲು ಹೋಗಿ ಕ್ರಿಕೆಟಿಗ ರಿಷಭ್ ಪಂತ್ ಅವರ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.
ಭಾನುವಾರ ಮ್ಯಾಕ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಉತ್ತರಾಖಂಡ ಸಿಎಂ, ರಿಷಭ್ ಪಂತ್ ಅವರ ಆರೋಗ್ಯ ವಿಚಾರಿಸಿದರು.
2022 ಡಿಸೆಂಬರ್ 30ರಂದು ಬೆಳಿಗ್ಗೆ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ನಡೆದ ಕಾರು ಅಪಘಾತದಲ್ಲಿ ಪಂತ್ ಗಾಯಗೊಂಡಿದ್ದರು. ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿತ್ತು. ಅದೃಷ್ಟವಶಾತ್ ಪಂತ್ ಪ್ರಾಣಾಪಾಯದಿಂದ ಪಾರಾಗಿದ್ದರು.
ಹರಿಯಾಣ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಚಾಲಕ ಮತ್ತು ನಿರ್ವಾಹಕ ಪಂತ್‌ರನ್ನು ರಕ್ಷಿಸಲು ನೆರವಾಗಿದ್ದರು. ಗಣರಾಜ್ಯೋತ್ಸವದಂದು ಅವರನ್ನು ಸನ್ಮಾನಿಸಲಾಗುವುದು ಎಂದು ಸಿಎಂ ಧಾಮಿ ತಿಳಿಸಿದರು.
ಏತನ್ಮಧ್ಯೆ ರಿಷಭ್ ಪಂತ್ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಇವನ್ನೂ ಓದಿ:
ಪಂತ್ ಆರೋಗ್ಯದಲ್ಲಿ ಚೇತರಿಕೆ
ಕಾರು ಅಪಘಾತದಲ್ಲಿ ಗಾಯಗೊಂಡ ರಿಷಭ್ ಪಂತ್ಗೆ ಪ್ಲಾಸ್ಟಿಕ್ ಸರ್ಜರಿ
ಅಪಘಾತ: ಕ್ರಿಕೆಟಿಗ ಪಂತ್ ತಾಯಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ
ಅಪಘಾತದ ವೇಳೆ ಪಂತ್‌ರನ್ನು ರಕ್ಷಿಸಿದ ಬಸ್ ಚಾಲಕ, ನಿರ್ವಾಹಕರಿಗೆ ಸನ್ಮಾನ
Video| ರಿಷಭ್ ಪಂತ್ ಕಾರು ಅಪಘಾತದ ಸಿಸಿ ಕ್ಯಾಮೆರಾ ದೃಶ್ಯಾವಳಿ ಬಿಡುಗಡೆ!
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.