ನವದೆಹಲಿ: ಭೂತಾನ್‌ನಭಾರತದ ನೂತನ ರಾಯಭಾರಿಯಾಗಿ ರುಚಿರಾ ಕಾಂಬೋಜ್ ಅವರನ್ನು ನೇಮಕ ಮಾಡಲಾಗಿದೆ.
ದಕ್ಷಿಣ ಆಫ್ರಿಕಾದಲ್ಲಿ 2017ರಿಂದ ಭಾರತದ ಹೈ ಕಮಿಷನರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ವಿದೇಶಾಂಗ ವ್ಯವಹಾರ ಸಚಿವಾಲಯ ತಿಳಿಸಿದೆ.
1987ರ ಕೇಡರ್‌ನ ಭಾರತೀಯ ವಿದೇಶಿ ಸೇವೆಯ ಅಧಿಕಾರಿಯಾದ ಇವರು ಸದ್ಯದಲ್ಲೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಹಿಂದೆ ಪ್ಯಾರಿಸ್‌ನಲ್ಲಿರುವ ಯುನೆಸ್ಕೋದ ಭಾರತ ಶಾಶ್ವತ ಪ್ರತಿನಿಧಿಯಾಗಿಯೂ ಸೇವೆ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.