ನವದೆಹಲಿ: ಯುದ್ಧ ಪೀಡಿತ ಉಕ್ರೇನ್‌ನಿಂದ ರೊಮೇನಿಯಾಕ್ಕೆ ಸ್ಥಳಾಂತರಗೊಂಡಿದ್ದ 250 ಮಂದಿಯನ್ನು ಭಾರತಕ್ಕೆ ಕರೆತರಲಾಯಿತು.
‘ಆಪರೇಷನ್ ಗಂಗಾ’ದ ಎರಡನೇ ಹಂತದಲ್ಲಿ ರೊಮೇನಿಯಾದ ರಾಜಧಾನಿ ಬುಕಾರೆಸ್ಟ್‌ನಿಂದ 250 ಮಂದಿ ಭಾನುವಾರ ಮುಂಜಾನೆ ನವದೆಹಲಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು ಎಂದು ‘ಎಎನ್‌ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.
250 ಮಂದಿ ಭಾರತೀಯರನ್ನೊಳಗೊಂಡ ವಿಮಾನಬುಕಾರೆಸ್ಟ್‌ನಿಂದ ಟೇಕಾಫ್ ಆಗಿದೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಶನಿವಾರ ತಡರಾತ್ರಿ ಟ್ವೀಟ್ ಮಾಡಿದ್ದರು.
ಮೊದಲ ಹಂತದ ತೆರವು ಕಾರ್ಯಾಚರಣೆಯಲ್ಲಿ 219 ಮಂದಿಯನ್ನು ಶನಿವಾರ ತಾಯ್ನಾಡಿಗೆ ಕರೆತರಲಾಗಿತ್ತು. ಬುಕಾರೆಸ್ಟ್‌ನಿಂದ 219 ಭಾರತೀಯರನ್ನು ಹೊತ್ತ ಏರ್ ಇಂಡಿಯಾ ವಿಮಾನವು ಶನಿವಾರ ಸಂಜೆ ಮುಂಬೈಗೆ ಬಂದಿಳಿದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.