ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಮುಂದಿನ ವರ್ಷ ಭಾರತಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ರಾಜತಾಂತ್ರಿಕ ಮೂಲಗಳು ತಿಳಿಸಿವೆ.
ಉಭಯ ನಾಯಕರು ಈ ಭೇಟಿಗೆ ಎದುರು ನೋಡುತ್ತಿದ್ದಾರೆ, ಆದರೆ ಪುಟಿನ್ ಭೇಟಿ ಬಗ್ಗೆ ಇನ್ನೂ ಅಂತಿಮವಾಗಬೇಕಿದೆ ಎಂದೂ ಅವರು ತಿಳಿಸಿದ್ದಾರೆ.
ಜುಲೈನಲ್ಲಿ ಮಾಸ್ಕೋದಲ್ಲಿ ಪುಟಿನ್‌ರನ್ನು ಭೇಟಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ, ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ್ದರು.
ಭಾರತ ಮತ್ತು ರಷ್ಯಾ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಬಲಗೊಳಿಸಬೇಕಿದೆ. ಪುಟಿನ್ ಅವರ ಯೋಜಿತ ಕಾರ್ಯಕ್ರಮಗಳ ಪಟ್ಟಿಯಲ್ಲಿ ಭಾರತ ಭೇಟಿಯೂ ಸೇರಿದೆ ಎಂದು ಕ್ರೆಮ್ಲಿನ್ ವಕ್ತಾರ ಹೇಳಿರುವುದಾಗಿ ವರದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.