ಕೊಚ್ಚಿ: ಕೇರಳದ ಪ್ರಸಿದ್ಧ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರಿಬ್ಬರು ಪ್ರವೇಶ ಮಾಡಿ ದರ್ಶನ ಪಡೆದ ನಂತರ ಕೇರಳದಲ್ಲಿ ಭುಗಿಲೆದ್ದ ಹಿಂಸಾರದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಶಬರಿಮಲೆ ಕರ್ಮಸಮಿತಿ ಕಾರ್ಯಕರ್ತ ಚಂದ್ರನ್ ಉಣ್ಣಿತಾನ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಅರ್ಧರಾತ್ರಿ ಶಬರಿಗಿರಿ ಏರಿದ ನಾರಿ
ದೇಗುಲಕ್ಕೆ ಮಹಿಳೆಯರ ಪ್ರವೇಶ ವಿರೋಧಿಸಿ ಶಬರಿಮಲೆ ಕರ್ಮಸಮಿತಿ ಬುಧವಾರ ಸಂಜೆ ಪಂದಳಂನಲ್ಲಿ ಪ್ರತಿಭಟನಾ ರ್‍ಯಾಲಿ ಆಯೋಜಿಸಿತ್ತು. ಆ ಸಂದರ್ಭ ಸ್ಥಳೀಯ ಸಿಪಿಎಂ ಕಚೇರಿ ಬಳಿಯಿಂದ ಪ್ರತಿಭಟನಾಕಾರರ ಮೇಲೆ ಕಲ್ಲುತೂರಾಟ ನಡೆದೆ ಎನ್ನಲಾಗಿದ್ದು, ಉಣ್ಣಿತಾನ್ ಗಾಯಗೊಂಡಿದ್ದರು ಎಂದು ಮನೋರಮಾ ಆನ್‌ಲೈನ್ ಸುದ್ದಿತಾಣ ವರದಿ ಮಾಡಿದೆ.
ಮಹಿಳೆಯರ ದೇಗುಲ ಪ್ರವೇಶವನ್ನು ವಿರೋಧಿಸಿ ಶಬರಿಮಲೆ ಕರ್ಮಸಮಿತಿ ಮತ್ತುಅಂತರರಾಷ್ಟ್ರೀಯ ಹಿಂದೂ ಪರಿಷತ್ (ಎಎಚ್‌ಪಿ) ಕರೆಕೊಟ್ಟಿರುವ ಕೇರಳ ಬಂದ್ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಪ್ರತಿಭಟನಾಕಾರರು ಹಿಂಸಾಚಾರ, ರಸ್ತೆ ತಡೆಗೆ ಮುಂದಾದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಪೊಲೀಸ್ ಮುಖ್ಯಸ್ಥ ಲೋಕನಾಥ್ ಬೆಹರಾ ಎಚ್ಚರಿಕೆ ನೀಡಿದ್ದಾರೆ.
ಇನ್ನಷ್ಟು...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.