ತಿರುವನಂತಪುರ: ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಏರಿಕೆಯಾಗುತ್ತಿರುವ ಕಾರಣ ದಿನಕ್ಕೆ 90 ಸಾವಿರ ಮಂದಿ ಭಕ್ತರಿಗಷ್ಟೇ ದೇವರ ದರ್ಶನಕ್ಕೆ ಅವಕಾಶ ನೀಡಲು ಕೇರಳ ಸರ್ಕಾರ ಸೋಮವಾರ ತೀರ್ಮಾನಿಸಿದೆ.
ದೇವರ ದರ್ಶನ ಸಮಯವನ್ನು ಒಂದು ಗಂಟೆ ವಿಸ್ತರಿಸಲಾಗಿದೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿಯ ಮೂಲಗಳು ತಿಳಿಸಿವೆ.
ಭಕ್ತರ ಸಂದಣಿಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಿ ಎಂದು ಕೇರಳ ಹೈಕೋರ್ಟ್ ಭಾನುವಾರ ಪತ್ತನಂತ್ತಿಟ್ಟ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ನಿರ್ದೇಶನ ನೀಡಿದ ಬಳಿಕ ಸರ್ಕಾರವು ಈ ತೀರ್ಮಾನ ಕೈಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.