ADVERTISEMENT

ಶಬರಿಮಲೆ ಮೇಲ್ಮನವಿ ಅರ್ಜಿ: ವಿಚಾರಣೆ ದಿನಾಂಕ ನಾಳೆ ತೀರ್ಮಾನ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2018, 8:39 IST
Last Updated 22 ಅಕ್ಟೋಬರ್ 2018, 8:39 IST
   

ನವದೆಹಲಿ: ಶಬರಿಮಲೆಗೆ ಎಲ್ಲ ವಯಸ್ಸಿನ ಮಹಿಳೆಯರು ಪ್ರವೇಶಿಸಬಹುದು ಎಂಬ ಸುಪ್ರೀಂಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿ ಅರ್ಜಿಗಳ ವಿಚಾರಣೆ ದಿನಾಂಕವನ್ನು ಸುಪ್ರೀಂಕೋರ್ಟ್ ಮಂಗಳವಾರತೀರ್ಮಾನಿಸಲಿದೆ.ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌ ನೇತೃತ್ವದ ಪೀಠ ಈ ತೀರ್ಮಾನ ಪ್ರಕಟಿಸಲಿದೆ.

ಶಬರಿಮಲೆಗೆ ಮಹಿಳೆಯರ ಪ್ರವೇಶ ಸಂಬಂಧಿಸಿ 19 ಮೇಲ್ಮನವಿಗಳು ಸುಪ್ರೀಂಕೋರ್ಟ್ ನಲ್ಲಿದೆ.ಇದರೊಂದಿಗೆ ಹಲವಾರು ರಿಟ್ ಅರ್ಜಿಗಳೂ ಇವೆ.

ಸೋಮವಾರ ಈ ವಿಷಯವನ್ನು ಮ್ಯಾಥ್ಯೂ ನೆಡುಂಪಾರ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌ ಮುಂದೆ ಪ್ರಸ್ತಾಪಿಸಿದ್ದಾರೆ. ಹೊಸತೊಂದು ರಿಟ್ ಅರ್ಜಿ ಸಲ್ಲಿಸಿದ್ದು, ಆ ಅರ್ಜಿಯನ್ನು ಶೀಘ್ರವೇ ಪರಿಗಣಿಸಬೇಕು ಎಂದು ಮ್ಯಾಥ್ಯೂ ಒತ್ತಾಯಿಸಿದ್ದಾರೆ.
ಈ ವಿಷಯದ ಬಗ್ಗೆ ಸ್ವಲ್ಪ ಹೊತ್ತು ಮುಖ್ಯ ನ್ಯಾಯಮೂರ್ತಿಗಳು ಇತರ ನ್ಯಾಯಮೂರ್ತಿಗಳೊಂದಿಗೆ ಚರ್ಚಿಸಿದ್ದುಮೇಲ್ಮನವಿ, ರಿಟ್ ಅರ್ಜಿಗಳ ವಿಚಾರಣೆ ಯಾವಾಗ ನಡೆಸಬೇಕೆಂಬುದರ ಬಗ್ಗೆ ಮಂಗಳವಾರ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.