ಶಬರಿಮಲೆ(ಕೇರಳ): ಮಂಡಲ ಪೂಜೆಯ ಬಳಿಕ ಬುಧವಾರ ರಾತ್ರಿ ಅಯ್ಯಪ್ಪ ದೇವಾಲಯದ ಬಾಗಿಲು ಮುಚ್ಚಿದ್ದು, ಮಕರವಿಳಕ್ಕು ಮಹೋತ್ಸವಕ್ಕಾಗಿ ಇದೇ 30ರಂದು ಮತ್ತೆ ಬಾಗಿಲು ತೆರೆಯಲಿದೆ.
ಮಕರವಿಳಕ್ಕು ಅಂಗವಾಗಿ ‘ಪ್ರಸಾದ ಶುದ್ಧ ಕ್ರಿಯೆ’ ಮತ್ತು ‘ಬಿಂಬ ಶುದ್ಧ ಕ್ರಿಯೆ’ ಮೊದಲಾದ ಧಾರ್ಮಿಕ ವಿಧಿಗಳು ಜನವರಿ 13 ಮತ್ತು 14ರಂದು ನಡೆಯಲಿವೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಹೇಳಿಕೆಯಲ್ಲಿ ತಿಳಿಸಿದೆ.
ಮಕರವಿಳಕ್ಕು ದಿನದಂದು ‘ತಿರುವಾಭರಣ’ ಸ್ವೀಕಾರ, ದೀಪಾರಾಧನೆಗೆ ಸಾವಿರಾರು ಮಂದಿ ಭಕ್ತರು ಸಾಕ್ಷಿಯಾಗಲಿದ್ದಾರೆ ಎಂದಿದೆ.
ಮಕರವಿಳಕ್ಕು ದರ್ಶನದ ಬಳಿಕ ಜನವರಿ 20ರವರೆಗೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.