ಚಂಡೀಗಡ: ಶಿರೋಮಣಿ ಅಕಾಲಿ ದಳದ ವರಿಷ್ಠ ಪ್ರಕಾಶ್ ಸಿಂಗ್ ಬಾದಲ್ (94) ಅವರಿಗೆ ಜ್ವರ ಕಾಣಿಸಿಕೊಂಡ ಕಾರಣ ಅವರನ್ನು ಇಲ್ಲಿನ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಗೆ (ಪಿಜಿಐಎಂಇಆರ್) ಶನಿವಾರ ದಾಖಲಿಸಲಾಗಿದೆ.
‘ಪಂಜಾಬ್ ಮಾಜಿ ಮುಖ್ಯಮಂತ್ರಿ ಬಾದಲ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದೆ’ ಎಂದು ಪಕ್ಷದ ನಾಯಕ ದಲ್ಜಿತ್ ಸಿಂಗ್ ಚೀಮಾ ಭಾನುವಾರ ತಿಳಿಸಿದ್ದಾರೆ.
ಇದಕ್ಕೂ ಮುನ್ನ ಜೂನ್‌ನಲ್ಲಿ ಶ್ವಾಸನಾಳದ ಅಸ್ತಮಾ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೊಹಾಲಿಯ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.