ನವದೆಹಲಿ: ಮಿದುಳು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಇಶಾ ಫೌಂಡೇಶನ್ ಸಂಸ್ಥಾಪಕ, ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ಖಾಸಗಿ ಆಸ್ಪತ್ರೆಯಿಂದ ಬುಧವಾರ ಬಿಡುಗಡೆಗೊಂಡಿದ್ದಾರೆ.
ಶಿವರಾತ್ರಿಗೂ ಮುನ್ನ ನಾಲ್ಕು ವಾರಗಳ ಕಾಲ ತೀವ್ರ ತಲೆನೋವಿನಿಂದ ಬಳಲುತ್ತಿದ್ದ ಸದ್ಗುರು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಿದುಳಿನ ರಕ್ಷಾ ಕವಚದಂತಿರುವ ಸ್ನಾಯುವಿನಲ್ಲಿ ರಕ್ತ ಸಂಗ್ರಹಗೊಂಡಿರುವುದೇ ತಲೆ ನೋವಿಗೆ ಕಾರಣ ಎಂದು ತಿಳಿದ ವೈದ್ಯರ ತಂಡ ಮಾರ್ಚ್ 17ರಂದು ಶಸ್ತ್ರಚಿಕಿತ್ಸೆ ನಡೆಸಿತ್ತು.
ಆಸ್ಪತ್ರೆಯಿಂದ ಹೊರಬರುತ್ತಿದ್ದಂತೆ ಅವರ ಅನುಯಾಯಿಗಳು ಹೂಗುಚ್ಛ ನೀಡಿ ಸ್ವಾಗತಿಸಿದ್ದಾರೆ.
66 ವರ್ಷದ ಸದ್ಗುರು ಮಣ್ಣನ್ನು ರಕ್ಷಿಸಿ, ನದಿಗಳನ್ನು ಉಳಿಸಿ ಮುಂತಾದ ಅಭಿಯಾನ ಕೈಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.