ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಸಂಬಂಧ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಮಾಜಿ ಮುಖಂಡ ಸಜ್ಜನ್ ಕುಮಾರ್ ಸೇರಿದಂತೆ 3 ಮಂದಿ ದೆಹಲಿಯ ವಿಚಾರಣಾ ನ್ಯಾಯಾಲಯಕ್ಕೆ ಸೋಮವಾರ ಶರಣಾಗಿದ್ದಾರೆ.
ಶರಣಾದ ಮಾಜಿ ಶಾಸಕರಾದ ಕಿಶಾನ್ ಖೋಖರ್ ಮತ್ತು ಮಹೇಂದರ್ ಯಾದವ್ ಅವರಿಗೆ ದೆಹಲಿ ನ್ಯಾಯಾಲಯ 10 ವರ್ಷ ಸೆರೆವಾಸ ಶಿಕ್ಷೆ ವಿಧಿಸಿದೆ.
ಆದರೆ ಸಜ್ಜನ್ ಅವರು ಶರಣಾಗಲು ನೀಡಿರುವ ಅವಧಿಯನ್ನು 2019ರ ಜನವರಿ 31ರವರೆಗೆ ವಿಸ್ತರಿಸಬೇಕು ಎಂದು ಮನವಿ ಮಾಡಿದ್ದರು. ಈ ಅರ್ಜಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್ ಡಿಸೆಂಬರ್ 17ರಂದು ಜೀವಾವಧಿ ಶಿಕ್ಷೆ ವಿಧಿಸಿತ್ತು. ಜೊತೆಗೆ ಡಿಸೆಂಬರ್ 31ರೊಳಗೆ ಶರಣಾಗುವಂತೆ ಸಜ್ಜನ್ ಅವರಿಗೆ ನ್ಯಾಯಾಲಯ ಸೂಚಿಸಿತ್ತು.
ಇದನ್ನೂ ಓದಿ: ಸಿಖ್ ವಿರೋಧಿ ದಂಗೆ: ಸಜ್ಜನ್ ಕುಮಾರ್‌ಗೆ ಜೀವಾವಧಿ
ಕಾಲಾವಧಿ ವಿಸ್ತರಣೆ ಕುರಿತ ಅರ್ಜಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್‌ನ ನಡೆಯನ್ನು ಪ್ರಶ್ನಿಸಿ ಸಜ್ಜನ್, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ದೆಹಲಿಯ ಕಂಟೋನ್ಮೆಂಟ್ ಪ್ರದೇಶದಲ್ಲಿ ನಡೆದ ಗಲಭೆಯಲ್ಲಿ ಒಂದೇ ಕುಟುಂಬದ ಐವರನ್ನು ಸಜ್ಜನ್ ಹತ್ಯೆ ಮಾಡಿದ್ದರು.
ಇದನ್ನೂ ಓದಿ: ಶರಣಾಗಲು ಹೆಚ್ಚುವರಿ ಕಾಲಾವಕಾಶ ಕೋರಿದ ಸಜ್ಜನ್ ಕುಮಾರ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.