ADVERTISEMENT

ಸಿಖ್‌ ವಿರೋಧಿ ದಂಗೆ ಪ್ರಕರಣ: ತೀರ್ಪು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಜ್ಜನ್‌

ಪಿಟಿಐ
Published 22 ಡಿಸೆಂಬರ್ 2018, 20:03 IST
Last Updated 22 ಡಿಸೆಂಬರ್ 2018, 20:03 IST
ಸಜ್ಜನ್‌ ಕುಮಾರ್‌
ಸಜ್ಜನ್‌ ಕುಮಾರ್‌   

ನವದೆಹಲಿ: 1984ರ ಸಿಖ್‌ ವಿರೋಧಿ ದಂಗೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್‌ ಜೀವಾವಧಿ ಶಿಕ್ಷೆ ವಿಧಿಸಿರುವುದನ್ನು ಪ್ರಶ್ನಿಸಿ, ಕಾಂಗ್ರೆಸ್ ಮಾಜಿ ನಾಯಕ ಸಜ್ಜನ್‌ ಕುಮಾರ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಸುಪ್ರೀಂ ಕೋರ್ಟ್‌ ದಾಖಲೆಗಳಿಂದ ಈ ಮಾಹಿತಿ ತಿಳಿದುಬಂದಿದೆ ಎಂದು ದಂಗೆಯ ಸಂತ್ರಸ್ತರನ್ನು ಪ್ರತಿನಿಧಿಸುತ್ತಿರುವ ಹಿರಿಯ ವಕೀಲ ಎಚ್‌.ಎಸ್‌. ಫೂಲ್ಕಾ ಹೇಳಿದ್ದಾರೆ.

ಆದರೆ, ಸಜ್ಜನ್‌ ಅವರ ಅರ್ಜಿಯನ್ನು ಕೈಗೆತ್ತಿಕೊಳ್ಳುವ ಮುನ್ನ ನಮ್ಮ ಆಕ್ಷೇಪಗಳನ್ನೂ ಪರಿಗಣಿಸಬೇಕು ಎಂದು ಕೋರಿ ಸಂತ್ರಸ್ತರು ಈಗಾಗಲೇ ಕೇವಿಯಟ್‌ ಸಲ್ಲಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.