ADVERTISEMENT

ಸಲ್ಮಾನ್‌ ಖಾನ್‌ಗೆ ಕೊಲೆ ಬೆದರಿಕೆ: ಆರೋಪಿ ಬಂಧನ

ಪಿಟಿಐ
Published 30 ಅಕ್ಟೋಬರ್ 2024, 15:34 IST
Last Updated 30 ಅಕ್ಟೋಬರ್ 2024, 15:34 IST
ಸಲ್ಮಾನ್ ಖಾನ್‌
ಸಲ್ಮಾನ್ ಖಾನ್‌   

ಮುಂಬೈ: ₹2 ಕೋಟಿ ನೀಡದಿದ್ದರೆ ಕೊಲೆ ಮಾಡುವುದಾಗಿ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 

ಮುಂಬೈನ ಬಾಂದ್ರಾ ನಿವಾಸಿ ಆಜಂ ಮೊಹಮ್ಮದ್‌ ಮುಸ್ತಫಾ ಎಂಬ ವ್ಯಕ್ತಿಯನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ‘ಸಲ್ಮಾನ್‌ ಖಾನ್‌ ₹2 ಕೋಟಿ ನೀಡಬೇಕು. ಇಲ್ಲದಿದ್ದರೆ ಆತನನ್ನು ಕೊಲೆ ಮಾಡಲಾಗುವುದು’ ಎಂದು ಮುಂಬೈನ ಸಂಚಾರ ಪೊಲೀಸರಿಗೆ ಮಂಗಳವಾರ ಬೆದರಿಕೆ ಸಂದೇಶವನ್ನು ರವಾನಿಸಲಾಗಿತ್ತು. ಬಳಿಕ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.

₹5 ಕೋಟಿಗೆ ಬೇಡಿಕೆ ಇಟ್ಟು, ಹಣ ನೀಡದಿದ್ದರೆ ಸಲ್ಮಾನ್‌ ಖಾನ್‌ ಅವರನ್ನು ಕೊಲೆ ಮಾಡಲಾಗುವುದು ಎಂದು ಇತ್ತೀಚೆಗೆ ಮುಂಬೈ ಸಂಚಾರ ಪೊಲೀಸ್ ವಾಟ್ಸ್‌ಆಪ್‌ ಸಹಾಯವಾಣಿಗೆ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ನ ಜೆಮ್‌ಶೆಡ್‌ಪುರದಲ್ಲಿ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ.

ADVERTISEMENT

ಈ ಮೊದಲು ಸಲ್ಮಾನ್‌ಗೆ ಗ್ಯಾಂಗ್‌ಸ್ಟಾರ್‌ ಲಾರೆನ್ಸ್‌ ಬಿಷ್ಣೋಯಿ ಗ್ಯಾಂಗ್‌ನಿಂದ ಕೊಲೆ ಬೆದರಿಕೆ ಬಂದಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.