ನವದೆಹಲಿ: ಸ್ತ್ರೀಯರು 16ನೇ ವಯಸ್ಸಿನಲ್ಲೇ ಮದುವೆಯಾಗುವುದರಲ್ಲಿ ತಪ್ಪಿಲ್ಲ ಎಂದು ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸದ ಎಸ್.ಟಿ.ಹಸನ್ ಹೇಳಿದ್ದಾರೆ.
ಮಹಿಳೆಯರ ಮದುವೆಯ ಕನಿಷ್ಠ ವಯಸ್ಸನ್ನು 18 ವರ್ಷದಿಂದ 21 ವರ್ಷಕ್ಕೆ ಏರಿಸುವುದಕ್ಕಾಗಿ ಕಾಯ್ದೆ ರೂಪಿಸಲು ಕೇಂದ್ರ ಸರ್ಕಾರ ಮುಂದಾಗಿರುವ ಬೆನ್ನಲ್ಲೇ ಅವರು ಈ ಹೇಳಿಕೆ ನೀಡಿದ್ದಾರೆ. ಅಲ್ಲದೆ, ಕೇಂದ್ರದ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಹುಡುಗಿಯರು ವಯಸ್ಸಿಗೆ ಬಂದಾಗ ಮದುವೆಯಾಗಬೇಕು. 16ನೇ ವಯಸ್ಸಿನಲ್ಲಿ ವಿವಾಹವಾಗುವುದು ತಪ್ಪಲ್ಲ. 18ನೇ ವಯಸ್ಸಿನಲ್ಲಿ ಸ್ತ್ರೀಯರು ಮತ ಚಲಾಯಿಸಬಹುದಾದರೆ ಮದುವೆ ಯಾಕಾಗಬಾರದು ಎಂದು ಅವರು ಪ್ರಶ್ನಿಸಿರುವ ವಿಡಿಯೊವನ್ನು ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.