ADVERTISEMENT

ಉತ್ತರ ಪ್ರದೇಶ | ಸಂಭಲ್‌ ಹಿಂಸಾಚಾರ: ಕಾಂಗ್ರೆಸ್‌ನಿಂದ ಮೌನ ಪ್ರತಿಭಟನೆ

ಪಿಟಿಐ
Published 25 ನವೆಂಬರ್ 2024, 13:20 IST
Last Updated 25 ನವೆಂಬರ್ 2024, 13:20 IST
<div class="paragraphs"><p>ಉತ್ತರ ಪ್ರದೇಶದ ಸಂಭಲ್‌ ಜಿಲ್ಲೆಯಲ್ಲಿ&nbsp; ನಡೆದ ಹಿಂಸಾಚಾರದ ದೃಶ್ಯ</p></div>

ಉತ್ತರ ಪ್ರದೇಶದ ಸಂಭಲ್‌ ಜಿಲ್ಲೆಯಲ್ಲಿ  ನಡೆದ ಹಿಂಸಾಚಾರದ ದೃಶ್ಯ

   

ಪಿಟಿಐ ಚಿತ್ರ

ಲಖನೌ: ಸಂಭಲ್‌ ಹಿಂಸಾಚಾರದ ಕುರಿತು ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಉತ್ತರ ಪ್ರದೇಶದ ಕಾಂಗ್ರೆಸ್‌ ಘಟಕದ ಕಾರ್ಯಕರ್ತರು ಸೋಮವಾರ ‘ಮೌನ ಪ್ರತಿಭಟನೆ’ ನಡೆಸಿದ್ದಾರೆ.

ADVERTISEMENT

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಉತ್ತರ ಪ್ರದೇಶ ಕಾಂಗ್ರೆಸ್‌ ಘಟಕದ ಮುಖ್ಯಸ್ಥ ಅಜಯ್‌ ರೈ, ‘ಸಂಭಲ್‌ನಲ್ಲಿ ನಡೆಯುತ್ತಿರುವುದು ನಿಸ್ಸಂಶಯವಾಗಿ ರಾಜ್ಯ ಸರ್ಕಾರ ನಡೆಸುತ್ತಿರುವ ದ್ವೇಷ ಮತ್ತು ದಬ್ಬಾಳಿಕೆಯ ರಾಜಕಾರಣವಾಗಿದೆ. ಹಿಂಸಾಚಾರದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಈ ಕುರಿತು ನ್ಯಾಯಾಂಗ ತನಿಖೆಯಾಗಬೇಕು ಮತ್ತು ಅದಕ್ಕೆ ಕಾರಣರಾದವರಿಗೆ ತಕ್ಕ ಶಿಕ್ಷೆಯಾಗಬೇಕು’ ಎಂದು ಅವರು ಹೇಳಿದ್ದಾರೆ.

ಲಖನೌದಲ್ಲಿನ ಪಕ್ಷದ ಕಚೇರಿಯಲ್ಲಿ ತಮ್ಮ ತೋಳುಗಳಿಗೆ ಕಪ್ಪು ಪಟ್ಟಿ ಧರಿಸುವ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

‘ನಾವು ಇಂದು ಮೌನ ಪ್ರತಿಭಟನೆಯನ್ನು ನಡೆಸಿದ್ದೇವೆ. ಘಟನೆಯ ಪರಿಸ್ಥಿತಿಯ ಬಗ್ಗೆ ಅರಿಯಲು ಶೀಘ್ರದಲ್ಲೇ ಕಾಂಗ್ರೆಸ್‌ ನಿಯೋಗ ಸಂಭಲ್‌ಗೆ ತೆರಳಲಿದೆ’ ಎಂದು ರೈ ಹೇಳಿದ್ದಾರೆ.

ಸಂಭಲ್‌ ಜಿಲ್ಲೆಯಲ್ಲಿರುವ ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಹಿಂಸಾಚಾರ ಸಂಭವಿಸಿದೆ. ಘಟನೆಯಲ್ಲಿ ನಾ‌ಲ್ವರು ಮೃತಪಟ್ಟಿದ್ದು, ಪೊಲೀಸ್‌ ಸಿಬ್ಬಂದಿ ಸೇರಿದಂತೆ ಹಲವು ಮಂದಿ ಗಾಯಗೊಂಡಿದ್ದಾರೆ.

ಹಿಂಸಾಚಾರ ಬೆನ್ನಲ್ಲೇ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದ್ದು, ನವೆಂಬರ್ 30ರವರೆಗೆ ಹೊರಗಿನವರ ಪ್ರವೇಶವನ್ನು ನಿರ್ಬಂಧಿಸಿದೆ. ಜತೆಗೆ ಸಂಭಲ್‌ ತಹಸಿಲ್‌ನಲ್ಲಿ ಇಂಟರ್‌ನೆಟ್‌ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.