ADVERTISEMENT

ಸಂದೇಶ್‌ಖಾಲಿ ಹಿಂಸಾಚಾರ: ಸಾಕ್ಷ್ಯಚಿತ್ರ ಬಿಡುಗಡೆ ಮಾಡಿದ ಬಿಜೆಪಿ

ಪಿಟಿಐ
Published 22 ಫೆಬ್ರುವರಿ 2024, 6:16 IST
Last Updated 22 ಫೆಬ್ರುವರಿ 2024, 6:16 IST
<div class="paragraphs"><p>ಸಂದೇಶ್‌ಖಾಲಿಯ ಸ್ಥಳೀಯ ಮಹಿಳೆಯರು&nbsp;</p></div>

ಸಂದೇಶ್‌ಖಾಲಿಯ ಸ್ಥಳೀಯ ಮಹಿಳೆಯರು 

   

(ಚಿತ್ರ ಕೃಪೆ–ಪಿಟಿಐ)

ನವದೆಹಲಿ: ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಬಿಜೆಪಿ ಗುರುವಾರ ತನ್ನ ಸಾಮಾಜಿಕ ಮಾಧ್ಯಮ ಖಾತೆ ಎಕ್ಸ್‌ನಲ್ಲಿ ಸಾಕ್ಷ್ಯಚಿತ್ರವನ್ನು ಬಿಡುಗಡೆ ಮಾಡಿದೆ.

ADVERTISEMENT

ರಾಜ್ಯದ ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ 20 ನಿಮಿಷಗಳ ಸುದೀರ್ಘ ವಿಡಿಯೊವನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.

'ಈ ಘಟನೆಯಿಂದ ನಮಗೆ ಆಘಾತವಾಗಿದ್ದು ನೋವುಂಟು ಮಾಡಿದೆ. ಇದು ನಮ್ಮ ಆತ್ಮಸಾಕ್ಷಿಯನ್ನು ಅಲುಗಾಡಿಸಿದೆ. ಸಂದೇಶ್‌ಖಾಲಿಯ ಸತ್ಯವನ್ನು ಮರೆಮಾಚಲು ಮಮತಾ ಬ್ಯಾನರ್ಜಿ ಪ್ರಯತ್ನಿಸುತ್ತಿದ್ದಾರೆ' ಎಂದು ಬಿಜೆಪಿ ಆರೋಪಿಸಿದೆ.

ಸಾಕ್ಷ್ಯಚಿತ್ರದಲ್ಲಿ ಹಲವು ಮಹಿಳೆಯರು ಅಪರಾಧಗಳ ಬಗ್ಗೆ ಮಾತನಾಡಿದ್ದನ್ನು ನೋಡಬಹುದಾಗಿದೆ. ಆದರೆ ಈ ಆರೋಪದ ಹಿಂದೆ ಬಿಜೆಪಿಯ ಕೈವಾಡವಿದೆ ಎಂದು ಟಿಎಂಸಿ ಹೇಳಿದೆ.

ಏನಿದು ಪ್ರಕರಣ?:

ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಶೇಖ್ ಷಹಜಹಾನ್ ಮತ್ತು ಅವರ ಬೆಂಬಲಿಗರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಸ್ಥಳೀಯ ಮಹಿಳೆಯರು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.