ADVERTISEMENT

ಸಂದೇಶ್‌ಖಾಲಿ ಪ್ರಕರಣ | ಮಹಿಳಾ ಆಯೋಗದ ಅಧ್ಯಕ್ಷೆ ವಿರುದ್ಧ ECಗೆ ದೂರು: ಟಿಎಂಸಿ

ಪಿಟಿಐ
Published 10 ಮೇ 2024, 9:33 IST
Last Updated 10 ಮೇ 2024, 9:33 IST
<div class="paragraphs"><p>ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ</p></div>

ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ

   

(ಪಿಟಿಐ ಚಿತ್ರ)

ಕೋಲ್ಕತ್ತ: ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವುದಾಗಿ ತೃಣಮೂಲ ಕಾಂಗ್ರೆಸ್(TMC) ಶುಕ್ರವಾರ ತಿಳಿಸಿದೆ.

ADVERTISEMENT

ಸಂದೇಶ್‌ಖಾಲಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಆರೋಪದ ಮೇಲೆ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ರಾಷ್ಟ್ರೀಯ ಮಹಿಳಾ ಆಯೋಗ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಶಿಫಾರಸು ಮಾಡಿತ್ತು .

ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆಯಾಗಿರುವ ರೇಖಾ ಶರ್ಮಾ ವಿರುದ್ಧ ಟಿಎಂಸಿ ಚುನಾವಣಾ ಆಯೋಗದ ಮೊರೆ ಹೋಗಲಿದೆ ‌ಎಂದು ಪಶ್ಚಿಮ ಬಂಗಾಳದ ಸಚಿವ ಮತ್ತು ಟಿಎಂಸಿ ವಕ್ತಾರ ಶಶಿ ಪಂಜಾ ಹೇಳಿದ್ದಾರೆ.

ಸಂದೇಶ್‌ಖಾಲಿಯ ಕೆಲವು ವಿಡಿಯೊಗಳು ಹರಿದಾಡುತ್ತಿದ್ದು, ಅವುಗಳನ್ನು ಟಿಎಂಸಿ ಹಂಚಿಕೊಂಡಿದೆ. ಇಂತಹ ಆರೋಪಗಳ ಬಗ್ಗೆ ಟಿಎಂಸಿ ಈಗಾಗಲೇ ಬಿಜೆಪಿ ಮತ್ತು ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ ಎಂದು ಪಂಜಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.