ADVERTISEMENT

ಸ್ಯಾನಿಟರಿ ನ್ಯಾಪ್‌ಕಿನ್ ತೆರಿಗೆ ಮುಕ್ತ

​ಪ್ರಜಾವಾಣಿ ವಾರ್ತೆ
Published 21 ಜುಲೈ 2018, 14:08 IST
Last Updated 21 ಜುಲೈ 2018, 14:08 IST
ಸ್ಯಾನಿಟರಿ ಪ್ಯಾಡ್
ಸ್ಯಾನಿಟರಿ ಪ್ಯಾಡ್   

ನವದೆಹಲಿ: ಸ್ಯಾನಿಟರಿ ನ್ಯಾಪ್‌ಕಿನ್ ಮೇಲಿನ 12% ತೆರಿಗೆಯನ್ನು ತೆಗೆದು ಹಾಕಬೇಕೆಂಬ ಒತ್ತಾಯಕ್ಕೆ ಕೇಂದ್ರ ಸರ್ಕಾರ ಮಣಿದಿದೆ.ಶನಿವಾರ ದೆಹಲಿಯಲ್ಲಿ ನಡೆದ ಜಿಎಸ್‍ಟಿ ಸಮಿತಿ ಸಭೆಯಲ್ಲಿ ಸ್ಯಾನಿಟರಿ ನ್ಯಾಪ್‌ಕಿನ್ ಅನ್ನು ತೆರಿಗೆ ಮುಕ್ತಗೊಳಿಸಲು ತೀರ್ಮಾನಿಸಲಾಗಿದೆ.

ಸರಕು ಮತ್ತು ಸೇವಾ ತೆರಿಗೆ ಸಮಿತಿಯ 28ನೇ ಸಭೆಯಲ್ಲಿ ಮಹಿಳೆಯರು ಬಳಸುವ ಸ್ಯಾನಿಟರಿ ನ್ಯಾಪ್‌ಕಿನ್ ಅನ್ನು ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗಿಡಲು ನಿರ್ಧರಿಸಲಾಗಿದೆ ಎಂದು ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಮಹಾರಾಷ್ಟ್ರದ ವಿತ್ತ ಸಚಿವ ಸುಧೀರ್ ಮುಂಗಾತಿವಾರ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT