ADVERTISEMENT

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸಂಜಯ್ ದತ್ ಸ್ಪರ್ಧೆ? ನಟ ಹೇಳಿದ್ದೇನು..

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಏಪ್ರಿಲ್ 2024, 14:01 IST
Last Updated 8 ಏಪ್ರಿಲ್ 2024, 14:01 IST
<div class="paragraphs"><p> ಸಂಜಯ್ ದತ್ </p></div>

ಸಂಜಯ್ ದತ್

   

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಾಲಿವುಡ್ ನಟ ಸಂಜಯ್‌ ದತ್‌ ಸ್ಪರ್ಧಿಸಲಿದ್ದಾರೆ ಎಂಬ ವದಂತಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಆದರೆ ಈ ಕುರಿತು ಸಂಜಯ್ ದತ್ ಅವರೇ ಎಕ್ಸ್‌ ಪೋಸ್ಟ್‌ನಲ್ಲಿ ಸ್ಪಷ್ಟನೆ ನೀಡಿ, ರಾಜಕೀಯ ಪ್ರವೇಶದ ವದಂತಿಯನ್ನು ತಳ್ಳಿಹಾಕಿದ್ದಾರೆ.

‘ನಾನು ರಾಜಕೀಯ ಜೀವನ ಪ್ರವೇಶಿಸಲಿದ್ದೇನೆ ಎಂಬ ಎಲ್ಲ ಊಹಾಪೋಹಗಳನ್ನು ತಳ್ಳಿಹಾಕುತ್ತೇನೆ. ನಾನು ಯಾವುದೇ ‍ಪಕ್ಷ ಸೇರಿಲ್ಲ. ಚುನಾವಣೆಗೂ ಸ್ಪರ್ಧಿಸುತ್ತಿಲ್ಲ’ ಎಂದು ಅವರು ಹೇಳಿದ್ದಾರೆ.

ADVERTISEMENT

‘ನಾನು ರಾಜಕೀಯ ಕ್ಷೇತ್ರಕ್ಕೆ ಕಾಲಿಡಲು ನಿರ್ಧರಿಸಿದರೆ ಅದನ್ನು ಘೋಷಿಸುವ ಮೊದಲ ವ್ಯಕ್ತಿ ನಾನೇ ಆಗಿರುತ್ತೇನೆ. ಸದ್ಯಕ್ಕೆ ನನ್ನ ಬಗ್ಗೆ ಹರಿದಾಡುತ್ತಿರುವ ವದಂತಿಗಳನ್ನು ನಂಬಬೇಡಿ’ ಎಂದಿದ್ದಾರೆ.

ಸಂಜಯ್ ದತ್‌ ಅವರು ಹರಿಯಾಣದ ಕರ್ನಾಲ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿತ್ತು. 2019ರ ಲೋಕಸಭಾ ಚುನಾವಣೆ ವೇಳೆಯೂ ಸಂಜಯ್ ದತ್ ರಾಜಕೀಯಕ್ಕೆ ಬರಲಿದ್ದಾರೆ ಎಂದು ಸುದ್ದಿಯಾಗಿತ್ತು.

2009ರ ಲೋಕಸಭಾ ಚುನಾವಣೆಯಲ್ಲಿ ಲಖನೌ ಲೋಕಸಭಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಸಂಜಯ್ ಕಣಕ್ಕಿಳಿದಿದ್ದರು. ಆದರೆ1993ರ ಮುಂಬೈ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಅವರ ಸ್ಪರ್ಧೆಗೆ ನಿರಾಕರಿಸಿತ್ತು.

ಸ್ಪರ್ಧೆಯಿಂದ ಹಿಂದೆ ಸರಿದ ಅವರು ನಂತರ ಸಮಾಜವಾದಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.