ನವದೆಹಲಿ: ಪಶ್ಚಿಮ ಬಂಗಾಳದ ಶಾಂತಿನಿಕೇತನವನ್ನು ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ.
ವಿಶ್ವಸಂಸ್ಥೆ ಭಾನುವಾರ ‘ಎಕ್ಸ್’ ನಲ್ಲಿ ಈ ಘೋಷಣೆ ಮಾಡಿದೆ.
‘ಗುರುದೇವ ರವೀಂದ್ರನಾಥ ಟ್ಯಾಗೋರ್ ಅವರ ದೃಷ್ಟಿಕೋನ ಮತ್ತು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಸಾಕಾರರೂಪವಾದ ಶಾಂತಿನಿಕೇತನವನ್ನು ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಿರುವುದು ಸಂತೋಷವಾಗಿದೆ. ಇದು ಭಾರತೀಯರಿಗೆ ಹೆಮ್ಮೆಯ ಕ್ಷಣ’ ಎಂದು ಮೋದಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.