ನವದೆಹಲಿ: ದೇಶದ ಸಮಗ್ರತೆಗೆ ಕೊಡುಗೆ ನೀಡುವ ವ್ಯಕ್ತಿಗಳು ಹಾಗೂ ಸಂಸ್ಥೆಗಳಿಗೆ ಪದ್ಮಪ್ರಶಸ್ತಿ ಮಾದರಿಯಲ್ಲಿಯೇ ‘ಸರ್ದಾರ್ ಪಟೇಲ್ ರಾಷ್ಟ್ರೀಯ ಏಕತಾ ಪ್ರಶಸ್ತಿ’ ನೀಡಲಾಗುವುದು ಎಂದು ಗೃಹ ಸಚಿವಾಲಯ ಶುಕ್ರವಾರ ತಿಳಿಸಿದೆ.
‘ಜನಾಂಗ, ವೃತ್ತಿ, ಹುದ್ದೆ, ಲಿಂಗ ಇವೆಲ್ಲವುಗಳ ಹೊರತಾಗಿ ಜನರನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುತ್ತದೆ. ವಿರಳಾತಿ ವಿರಳ ಪ್ರಕರಣಗಳಲ್ಲಿ ಮಾತ್ರ ಮರಣೋತ್ತರವಾಗಿ ಪ್ರಶಸ್ತಿ ನೀಡಲಾಗುತ್ತದೆ. ಆಯ್ಕೆಯಾದವರ ಹೆಸರನ್ನು, ಗೆಜೆಟ್‌ನಲ್ಲಿ ಪ್ರಕಟಿಸಲಾಗುವುದು ಕಮಲದ ಎಲೆಯ ಆಕಾರದಲ್ಲಿನ ಬೆಳ್ಳಿ ಅಥವಾ ಚಿನ್ನದ ಪದಕವನ್ನು ಪ್ರಶಸ್ತಿಯಾಗಿ ನೀಡಲಾಗುತ್ತದೆ’ ಎಂದು ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.