ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಘಟಕದ ಅಧ್ಯಕ್ಷರಾಗಿ ಸತ್ ಶರ್ಮಾ ಅವರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆದೇಶ ಹೊರಡಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ರವೀಂದ್ರ ರೈನಾ ಅವರನ್ನು ಪಕ್ಷದ ರಾಷ್ಟ್ರೀಯ ನಾಯಕತ್ವದ ಭಾಗವಾಗಿ ನಿಯೋಜಿಸಲಾಗಿದೆ ಎಂದು ಪಕ್ಷ ಪ್ರಕಟಣೆಯಲ್ಲಿ ತಿಳಿಸಿದೆ.
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಈಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ (ಜೆಕೆಎನ್‌ಸಿ)–ಕಾಂಗ್ರೆಸ್ ಮೈತ್ರಿಕೂಟ ಸರಳ ಬಹುಮತ ಪಡೆದಿತ್ತು. ಬಿಜೆಪಿ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು.
ಈ ಚುನಾವಣೆಯಲ್ಲಿ ಜೆಕೆಎನ್‌ಸಿ 42, ಬಿಜೆಪಿ 29, ಕಾಂಗ್ರೆಸ್ 6, ಪಿಡಿಪಿ 3, ಪಕ್ಷೇತರರು 10 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.