ನವದೆಹಲಿ: ಮಾಜಿ ರಾಜ್ಯಪಾಲ ತ್ಯಪಾಲ್ ಮಲಿಕ್ ಅವರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆ
ದಿದ್ದ ವಿಮಾ ಹಗರಣಕ್ಕೆ ಸಂಬಂಧಿಸಿದಂತೆ ಕೆಲ ಸ್ಪಷ್ಟನೆಗಳನ್ನು ಬಯಸಿರುವ ಸಿಬಿಐ, ಇದಕ್ಕಾಗಿ ತನ್ನ ಎದುರು ಹಾಜರಾಗುವಂತೆ ಅವರಿಗೆ ಸೂಚಿಸಿದೆ.
ಸರ್ಕಾರಿ ನೌಕರರಿಗೆ ವೈದ್ಯಕೀಯ ವಿಮೆ ಒದಗಿಸುವುದಕ್ಕೆ ಸಂಬಂಧಿಸಿದ ಗುತ್ತಿಗೆ ನೀಡಿಕೆ ಹಾಗೂ ಕಿರು ಜಲವಿದ್ಯುತ್ ಯೋಜನೆಯ ₹2,200 ಕೋಟಿ ಮೊತ್ತದ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಮಲಿಕ್ ಆರೋಪಿಸಿದ್ದರು. ಸಿಬಿಐ ಈ ಪ್ರಕರಣಗಳಿಗೆ ಸಂಬಂಧಿಸಿ ಕಳೆದ ಏಪ್ರಿಲ್‌ನಲ್ಲಿ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿತ್ತು.
‘ತಾವು ಮಾಡಿರುವ ಆರೋಪಕ್ಕೆ ಸಂಬಂಧಿಸಿ ಕೆಲ ಮಾಹಿತಿಗಳನ್ನು ಒದಗಿಸುವಂತೆ ಸಿಬಿಐ ಅಧಿಕಾರಿಗಳು ಮಲಿಕ್ ಅವರಿಗೆ ಸೂಚಿಸಿದ್ದಾರೆ’ ಎಂದು ಅಧಿಕಾರಿಗಳು ಗುರುವಾರ ಹೇಳಿದ್ದರು.
‘ಸಿಬಿಐ ಅಧಿಕಾರಿಗಳು ನನಗೆ ಸಮನ್ಸ್ ನೀಡಿಲ್ಲ. ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದ ಕೆಲ ವಿಚಾರಗಳ ಕುರಿತು ಸ್ಪಷ್ಟನೆ ಕೇಳಿದ್ದಾರೆ. ಇದಕ್ಕಾಗಿ ದೆಹಲಿಯ ಸಿಬಿಐ ಅತಿಥಿ ಗೃಹಕ್ಕೆ ಬರುವಂತೆ ಸೂಚಿಸಿದ್ದಾರೆ’ ಎಂದು ಮಲಿಕ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.