ನವದೆಹಲಿ: ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ನೀಡಿದ್ದ ಮಧ್ಯಂತರ ಜಾಮೀನು ಅವಧಿಯನ್ನು ಸುಪ್ರೀಂ ಕೋರ್ಟ್ ನ.6ರವರೆಗೆ ವಿಸ್ತರಿಸಿ ಆದೇಶಿಸಿದೆ.
ಜೈನ್ ಪರ ಹಾಜರಿದ್ದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಹಾಗೂ ಬೇಲಾ ಎಂ.ತ್ರಿವೇದಿ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು.
‘ಜಾಮೀನು ಅರ್ಜಿಯ ವಿಚಾರಣೆಯನ್ನು ನ.6ರಂದು ನಡೆಸಲಾಗುವುದು. ಈಗಾಗಲೇ ನೀಡಿರುವ ಮಧ್ಯಂತರ ಜಾಮೀನನ್ನು ಮುಂದಿನ ವಿಚಾರಣೆ ದಿನದವರೆಗೆ ವಿಸ್ತರಿಸಲಾಗಿದೆ’ ಎಂದು ನ್ಯಾಯಪೀಠ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.