ADVERTISEMENT

ಹಣ ಅಕ್ರಮ ವರ್ಗಾವಣೆ ಪ್ರಕರಣ: ಸೇಂಥಿಲ್‌ ಬಾಲಾಜಿ ಜಾಮೀನು ಅರ್ಜಿ ವಿಚಾರಣೆ 22ಕ್ಕೆ

​ಪ್ರಜಾವಾಣಿ ವಾರ್ತೆ
Published 13 ಜುಲೈ 2024, 14:40 IST
Last Updated 13 ಜುಲೈ 2024, 14:40 IST
ವಿ.ಸೇಂಥಿಲ್ ಬಾಲಾಜಿ
ವಿ.ಸೇಂಥಿಲ್ ಬಾಲಾಜಿ   

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿರುವ ತಮಿಳುನಾಡಿನ ಮಾಜಿ ಸಚಿವ ವಿ.ಸೇಂಥಿಲ್ ಬಾಲಾಜಿ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಜುಲೈ 22ಕ್ಕೆ ಮುಂದೂಡಿದೆ.

ನ್ಯಾಯಮೂರ್ತಿಗಳಾದ ಅಭಯ್‌ ಎಸ್‌. ಓಕಾ ಮತ್ತು ಅಗಸ್ಟೀನ್‌ ಜಾರ್ಜ್‌ ಮಸೀಹ್‌ ಅವರು, ‘ಕಾಲಾವಕಾಶ ಇಲ್ಲದ ಕಾರಣ ವಿಚಾರಣೆಯನ್ನು ಮುಂದೂಡಲಾಗುತ್ತಿದೆ’ ಎಂದು ಹೇಳಿದರು.

ಬಾಲಾಜಿ ಅವರ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂ ಕೋರ್ಟ್‌ ಏ.1ರಂದು ನೋಟಿಸ್‌ ಜಾರಿ ಮಾಡಿತ್ತು.

ADVERTISEMENT

ಫೆಬ್ರುವರಿ 28ರಂದು ಮದ್ರಾಸ್ ಹೈಕೋರ್ಟ್‌ ಬಾಲಾಜಿ ಅವರಿಗೆ ಜಾಮೀನು ನೀಡಲು ನಿರಾಕರಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.