ನವದೆಹಲಿ: ಉತ್ತರ ಪ್ರದೇಶದ ಶ್ರೀಕೃಷ್ಣ ಜನ್ಮಭೂಮಿ–ಶಾಹಿ ಈದ್ಗಾ ವಿವಾದಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ದಾಖಲೆ ಪತ್ರಗಳನ್ನು ಅಕ್ಟೋಬರ್ 30ರೊಳಗೆ ಖುದ್ದಾಗಿ ಸಲ್ಲಿಸುವಂತೆ ಅಲಹಾಬಾದ್ ಹೈಕೋರ್ಟ್‌ನ ರಿಜಿಸ್ಟ್ರಾರ್‌ಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ನ್ಯಾಯಮೂರ್ತಿಗಳಾದ ಕಿಶನ್ ಕೌಲ್ ಹಾಗೂ ಸುಧಾಂಶು ಧುಲಿಯಾ ಅವರಿದ್ದ ವಿಭಾಗೀಯ ನ್ಯಾಯಪೀಠವು, ಜುಲೈ 21ರಂದು ಈ ಪ್ರಕರಣದ ವಿಚಾರಣೆ ನಡೆಸಿತ್ತು.
ಮಂಗಳವಾರ ನಡೆದ ವಿಚಾರಣೆ ವೇಳೆ ದಾಖಲೆಗಳನ್ನು ಸಲ್ಲಿಸಲು ವಿಳಂಬ ಮಾಡಿರುವುದನ್ನು ಗಮನಿಸಿದ ನ್ಯಾಯಮೂರ್ತಿಗಳು, ‘ನ್ಯಾಯಪೀಠ ನೀಡಿರುವ ಆದೇಶವನ್ನು ಆಡಳಿತ ವಿಭಾಗದಿಂದ ಮುಖ್ಯ ನ್ಯಾಯಮೂರ್ತಿ ಅವರ ಮುಂದೆ ಹಾಜರುಪಡಿಸಬೇಕಿದೆ. ಹಾಗಾಗಿ, ದಾಖಲೆಗಳನ್ನು ಸಲ್ಲಿಸುವಂತೆ ಹಿಂದಿನ ಆದೇಶ ಸಹಿತ ಮತ್ತೊಮ್ಮೆ ರಿಜಿಸ್ಟ್ರಾರ್ ಅವರ ಗಮನಕ್ಕೆ ತರಬೇಕು’ ಎಂದು ಸೂಚಿಸಿದರು.
ಈ ವಿವಾದ ಕುರಿತ ವಿಚಾರಣೆಯನ್ನು ಹೈಕೋರ್ಟ್ ಮೇ 26ರಂದು ಮಥುರಾ ನ್ಯಾಯಾಲಯಕ್ಕೆ ವರ್ಗಾಯಿಸಿದೆ. ಇದನ್ನು ಶಾಹಿ ಮಸೀದಿ ಈದ್ಗಾ ಆಡಳಿತ ಸಮಿತಿಯ ಟ್ರಸ್ಟ್, ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.