ನವದೆಹಲಿ: ಮಹಾತ್ಮಗಾಂಧಿ ಅವರಿಗೆ ಭಾರತರತ್ನ ನೀಡದಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು, ಎಲ್ಲ ಔಪಚಾರಿಕಬಿರುದುಗಳನ್ನು ಮೀರಿದ ಉನ್ನತ ಗೌರವವನ್ನು ರಾಷ್ಟ್ರಪಿತ ಮಹಾತ್ಮಗಾಂಧಿ ಹೊಂದಿದ್ದಾರೆ ಎಂದು ಹೇಳಿದೆ.
ಮುಖ್ಯ ನ್ಯಾಯಮೂರ್ತಿ ಸಿ.ಎ.ಬೊಬಡೆ, ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಸೂರ್ಯಕಾಂತ್ ಅವರಿದ್ದ ಪೀಠ, ‘ಗಾಂಧಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಸರ್ಕಾರಕ್ಕೆ ಕೋರ್ಟ್ ನಿರ್ದೇಶನ ನೀಡುವುದು ಸಮರ್ಥನೀಯವಲ್ಲ. ಪ್ರಶಸ್ತಿಗಿಂತಲೂ ಉನ್ನತ ಸ್ಥಾನದಲ್ಲಿಅವರನ್ನು ನಾಗರಿಕರು ಇರಿಸಿದ್ದಾರೆ’ ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೆ, ‘ಅರ್ಜಿದಾರರ ಭಾವನೆಗೆ ಮನ್ನಣೆ ನೀಡಲಾಗುವುದು. ಈ ಕುರಿತು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಬಹುದು’ ಎಂದು ಅರ್ಜಿದಾರರಿಗೆ ಸೂಚಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.