ನವದೆಹಲಿ: ಮಾಲೆಗಾಂವ್ ಸ್ಫೋಟ (2008) ಪ್ರಕರಣದ ಆರೋಪಿ ಸಮೀರ್ ಕುಲಕರ್ಣಿ ಅವರ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.
ತಮ್ಮ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಎನ್ಐಎ ಕಾನೂನು ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರವು ಅನುಮತಿ ನೀಡಿಲ್ಲ ಎಂದು ಕುಲಕರ್ಣಿ ಕೋರ್ಟ್ ಮೆಟ್ಟಿಲೇರಿದ್ದರು.
ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಅರವಿಂದ್ ಕುಮಾರ್ ಅವರಿದ್ದ ನ್ಯಾಯಪೀಠವು, ‘ಅರ್ಜಿಯನ್ನು ವಜಾಗೊಳಿಸಿರುವ ಬಾಂಬೆ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮಧ್ಯಪ್ರವೇಶ ಮಾಡುವುದಿಲ್ಲ’ ಎಂದು ಕುಲಕರ್ಣಿ ಅವರ ಪರ ವಕೀಲರಿಗೆ ತಿಳಿಸಿತು.
ನಾಸಿಕ್ ಜಿಲ್ಲೆಯ ಮಾಲೆಗಾಂವ್ ಪಟ್ಟಣದಲ್ಲಿ ಅವಳಿ ಸ್ಫೋಟ ಸಂಭವಿಸಿ ಆರು ಮಂದಿ ಮೃತಪಟ್ಟು, ನೂರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.