ADVERTISEMENT

ಮಥುರಾ ಮಸೀದಿ ಸಮೀಕ್ಷೆ ತಡೆಗೆ ಸುಪ್ರೀಂ ಕೋರ್ಟ್ ನಕಾರ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2023, 14:19 IST
Last Updated 15 ಡಿಸೆಂಬರ್ 2023, 14:19 IST
<div class="paragraphs"><p>ಸುಪ್ರೀಂ ಕೋರ್ಟ್‌</p></div>

ಸುಪ್ರೀಂ ಕೋರ್ಟ್‌

   

ನವದೆಹಲಿ: ಮಥುರಾದಲ್ಲಿ ಕೃಷ್ಣ ಜನ್ಮಭೂಮಿ ದೇವಸ್ಥಾನಕ್ಕೆ ಹೊಂದಿಕೊಂಡಂತೆ ಇರುವ ಶಾಹಿ ಈದ್ಗಾ ಆವರಣದಲ್ಲಿ ಸಮೀಕ್ಷೆ ನಡೆಸಲು ಗುರುವಾರ ಅನುಮತಿ ನೀಡಿರುವ ಅಲಹಾಬಾದ್‌ ಹೈಕೋರ್ಟ್‌ನ ಆದೇಶಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಮೇಲ್ಮನವಿ ಮೂಲಕ ಆದೇಶವನ್ನು ಪ್ರಶ್ನಿಸುವಂತೆ ಸೂಚಿಸಿದೆ.

ಹೈಕೋರ್ಟ್‌ ಆದೇಶದಲ್ಲಿ ಮಧ್ಯಪ್ರವೇಶಿಸಬೇಕೆಂದು ಮಸೀದಿ ಆಡಳಿತ ಮಂಡಳಿ ಪರ ಹಿರಿಯ ವಕೀಲ ಹುಜೇಫಾ ಅಹ್ಮದಿ ಅವರು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್‌ ಭಟ್ಟಿ ಅವರ ಪೀಠವನ್ನು ಕೋರಿದ್ದರು.

ADVERTISEMENT

‘ಈ ಹಂತದಲ್ಲಿ ನಾವು ಯಾವುದಕ್ಕೂ ತಡೆ ನೀಡುವುದಿಲ್ಲ. ಪ್ರತಿಕೂಲ ಆದೇಶ ಬಂದರೆ ನೀವು ಇಲ್ಲಿ ಬರಬರಬಹುದು’ ಎಂದು ಪೀಠ ಹೇಳಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.